ಪಾಟ್ನಾ:ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಅವರ ಪ್ರಮಾಣ ವಚನ ಸ್ವೀಕಾರಕ್ಕೆ ರಾಜಭವನದಲ್ಲಿ ಸಿದ್ಧತೆ ಆರಂಭವಾಗಿದೆ.
ಇದನ್ನೂ ಓದಿ:ಉಮಾಶ್ರೀ 2 ತಿಂಗಳ ಪ್ರೆಗ್ನೆಂಟ್ ಇದ್ದಾಗಲೇ ಪತಿ ಬಿಟ್ಟೋದ!; ಕುಡಿತದ ಚಟಕ್ಕೆ ಬಲಿ ಆಯ್ತಾ ನಟಿ ಸಂಸಾರ
ನಿತೀಶ್​ ಕುಮಾರ್ ಅವರು ಭಾನುವಾರ ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್ ಅವರಿಗೆ ನಿತೀಶ್ ಕುಮಾರ್ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇನೆ. ಈಗ ಅಸ್ತಿತ್ವದಲ್ಲಿದ್ದ ಸರ್ಕಾರವು ಅಂತ್ಯಗೊಂಡಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ. ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ನಿತೀಶ್​ ಕುಮಾರ್ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಮುಂಚೂಣಿಯಲ್ಲಿದ್ದರು. ಅದರ ಮೊದಲ ಸಭೆಯೂ ಪಾಟ್ನಾದಲ್ಲಿ ನಡೆದಿತ್ತು. ಆದರೆ ಚುನಾವಣೆ ನಡೆಯುವ ಕೇವಲ ಎರಡು ತಿಂಗಳ ಮೊದಲು ಹಲವರ ನಿರ್ಧಾರ ಬದಲಾಗಿದೆ. ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಜೆಪಿ ಸರ್ವಾನುಮತದಿಂದ ಅಂಗೀಕರಿಸಿದೆ.
ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ಬಿಜೆಪಿ ಶಾಸಕರು ತಮ್ಮ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಅದನ್ನು ನಿತೀಶ್ ಕುಮಾರ್ ಅವರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತುತ 243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು 45 ಮತ್ತು ಬಿಜೆಪಿ 78 ಶಾಸಕರನ್ನು ಹೊಂದಿದೆ. ಕುಮಾರ್ ಒಬ್ಬ ಸ್ವತಂತ್ರ ಶಾಸಕರ ಬೆಂಬಲವನ್ನೂ ಹೊಂದಿದ್ದಾರೆ. ಈಗಾಗಲೇ ಎನ್‌ಡಿಎ ಭಾಗವಾಗಿರುವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಾಲ್ವರು ಶಾಸಕರನ್ನು ಹೊಂದಿದೆ.
ಲೋಕಸಭೆ ಚುನಾವಣೆ: ರಾಹುಲ್​ ಗಾಂಧಿ ಸ್ಪರ್ಧಿಸುವ ಕ್ಷೇತ್ರವನ್ನು ಬಹಿರಂಗಪಡಿಸಿದ ಸಂಸದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − one =
Remember me
