ನವದೆಹಲಿ:ವೇದಿಕೆಯಲ್ಲಿ ಆಸಿನರಾಗಿದ್ದ ನರೇಂದ್ರ ಮೋದಿ ಅವರ ಪಕ್ಕದಲ್ಲಿ ಕುಳಿತ್ತಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​, ಮೋದಿ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಫೋಟೋ ನೋಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮುಖ್ಯಮಂತ್ರಿಗಳ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಸಕಾರಾತ್ಮಕ ಮನೋಭಾವವಿರಲಿ: ಪರೀಕ್ಷೆ ಫಲಿತಾಂಶದ ಬಗ್ಗೆ ಅನಗತ್ಯ ಆತಂಕ ಬೇಡ
ಈ ಬಗ್ಗೆ ಮಾತನಾಡಿದ ತೇಜಸ್ವಿ ಯಾದವ್, “ಸಿಎಂ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಪಾದ ಮುಟ್ಟಿದ ಚಿತ್ರ ನೋಡಿದೆ. ನಮಗೆ ನಾಚಿಕೆ ಆಯ್ತು… ಇವರಿಗೆ ಏನಾಯ್ತು ಅಂತ? ನಿತೀಶ್ ಕುಮಾರ್ ನಮ್ಮ ಆಪ್ತ. ನಿತೀಶ್​ರಷ್ಟು ಅನುಭವಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ. ಅಸಲಿಗೆ ಅವರು ಪ್ರಧಾನಿ ಪಾದಗಳನ್ನು ಮುಟ್ಟುತ್ತಿದ್ದಾರೆ ಅನ್ನೋದೇ ಆಶ್ವರ್ಯ” ಎಂದರು.
ಈ ಮಧ್ಯೆ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 4,000ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುವ ಮುನ್ನ ಲಕ್ಷ ಎಂದು ತಪ್ಪಾಗಿ ಉಲ್ಲೇಖಿಸಿದ್ದಕ್ಕೆ ನಿತೀಶ್​ ಕುಮಾರ್​​ರನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಮಾಡಿ, ಟೀಕಿಸಲಾಗುತ್ತಿದೆ. ಈ ಹೇಳಿಕೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ ಆರ್​ಜೆಡಿ ವಕ್ತಾರ ಸಾರಿಕಾ ಪಾಸ್ವಾನ್, “ಆರಂಭದಲ್ಲಿ ಮುಖ್ಯಮಂತ್ರಿಗಳು ನಾಲ್ಕು ಲಕ್ಷಕ್ಕೂ ಹೆಚ್ಚು ಅಂತಾರೆ, ತದನಂತರ 4,000 ಸಾಕು ಎಂದು ಭಾವಿಸುತ್ತಾರೆ” ಎಂದು ತಮ್ಮ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟರ್​) ಲೇವಡಿ ಮಾಡಿದ್ದಾರೆ,(ಏಜೆನ್ಸೀಸ್).
ಆರ್​ಸಿಬಿ ಮ್ಯಾನೆಜ್​ಮೆಂಟ್​ಗೆ ಬುದ್ದಿ ಕಲಿಸಲು ಮುಂದಾದ್ರು ಫ್ಯಾನ್ಸ್​! ಹೀಗೆ ಮಾಡೋದೇ ಸರಿ ಅಂತಿದ್ದಾರೆ…

ಮುಖದಲ್ಲಿ ಕಪ್ಪು ಕಲೆ ಹೋಗ್ತಿಲ್ವಾ? ಚಿಂತೆ ಬಿಡಿ! ಈ 2 ತರಕಾರಿಯಲ್ಲಿದೆ ಚಮತ್ಕಾರ, ಟ್ರೈ ಮಾಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seven =
Remember me
