ಜೈಪುರ:ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ರಾಜಸ್ಥಾನ ರಾಜಕೀಯ ಹೈಡ್ರಾಮದ ಕ್ಲೈಮ್ಯಾಕ್ಸ್ ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಪಕ್ಷದ ನಾಯಕ ಸಚಿನ್ ಪೈಲಟ್ ಹಾಗೂ ಅವರ 18 ಬೆಂಬಲಿಗ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆಯ ನೋಟಿಸ್ ವಿರುದ್ಧದ ಅರ್ಜಿ ವಿಚಾರಣೆಯನ್ನು ರಾಜಸ್ಥಾನ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಪೈಲಟ್, ಅವರ ಬೆಂಬಲಿಗ ಶಾಸಕರ ವಿರುದ್ಧ ಮಂಗಳವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಇದಕ್ಕೆ ಸ್ಪೀಕರ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಒಪ್ಪಿಗೆ ಸೂಚಿಸಿದ್ದಾರೆ.
ಬಂಡಾಯ ನಾಯಕರು ಸಲ್ಲಿಸಿರುವ ಪಿಟಿಷನ್​ಗೆ ಶನಿವಾರ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್​ನ ಮುಖ್ಯ ಸಚೇತಕ ಮಹೇಶ್ ಜೋಶಿಗೆ ಕೋರ್ಟ್ ಸೂಚನೆ ನೀಡಿದೆ. ನ್ಯಾ. ಇಂದ್ರಜಿತ್ ಮಹಾಂತಿ ಹಾಗೂ ನ್ಯಾ. ಪ್ರಕಾಶ್ ಗುಪ್ತಾ ಇದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸುತ್ತಿದೆ.
ವಿಧಾನ ಮಂಡಳ ಅಧಿವೇಶನ ನಡೆಯುತ್ತಿರು ವಾಗ ಮಾತ್ರ ವಿಪ್ ಅನ್ವಯವಾಗುತ್ತದೆ. ಉಳಿದ ಸಂದರ್ಭದಲ್ಲಿ ಇದು ಅನ್ವಯವಾಗುವುದಿಲ್ಲ. ಸಂವಿಧಾನದ 10ನೇ ಪರಿಚ್ಛೇದ ಅನ್ವಯ ಶಾಸಕರಿಗೆ ನೋಟಿಸ್ ನೀಡಿರುವುದು ಸರಿಯಲ್ಲ. ಪಕ್ಷದ ಸದಸ್ಯತ್ವವನ್ನು ತಾವಾಗಿಯೇ ತ್ಯಜಿಸಿದಾಗ ಮಾತ್ರ ಶಾಸಕರನ್ನು ಅನರ್ಹಗೊಳಿಸಲು ಈ ಪರಿಚ್ಛೇದದಲ್ಲಿ ಅವಕಾಶವಿದೆ. ಆದರೆ ಸಚಿನ್ ಪೈಲಟ್ ಹಾಗೂ ಬೆಂಬಲಿಗರು ಇನ್ನೂ ಪಕ್ಷವನ್ನು ತ್ಯಜಿಸಿಲ್ಲ. ಹೀಗಾಗಿ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಬಂಡಾಯ ನಾಯಕರ ಪರ ವಕೀಲರಾದ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ವಾದಿಸಿದರು.
ನಾವು ಕಾಂಗ್ರೆಸ್​ನಿಂದ ಚುನಾವಣೆಗೆ ನಿಂತು ಗೆದ್ದಿದ್ದೇವೆ. ಬೇರೆ ಪಕ್ಷವನ್ನು ಸೇರುವ ಚಿಂತನೆ ಇಲ್ಲ. ರಾಜ್ಯದ ನಾಯಕತ್ವ ಬದಲಾವಣೆಗೆ ಆಗ್ರಹ ಮಾಡಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶ ಇದೆ. ಆದರೆ ನಮ್ಮನ್ನು ಅನರ್ಹಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಬಂಡಾಯ ಶಾಸಕರು ಕೋರ್ಟ್​ಗೆ ಪಿಟಿಷನ್​ನಲ್ಲಿ ತಿಳಿಸಿದ್ದಾರೆ.
ಎಫ್​ಐಆರ್ ದಾಖಲು
ಕಾಂಗ್ರೆಸ್ ನಾಯಕರು ಮಾಡಿರುವ ಆರೋಪ ಹಿನ್ನೆಲೆಯಲ್ಲಿ ರಾಜಸ್ಥಾನ ಪೊಲೀಸರು ಎರಡು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ನಲ್ಲಿ ಗಜೇಂದ್ರ ಸಿಂಗ್ ಎಂದು ಮಾತ್ರ ಉಲ್ಲೇಖವಾಗಿದೆ. ಕೇಂದ್ರ ಸಚಿವ ಎಂದು ಎಲ್ಲೂ ಉಲ್ಲೇವಾಗಿಲ್ಲ. ಶಾಸಕರ ಖರೀದಿ ಹಾಗೂ ಸರ್ಕಾರ ಉರುಳಿಸುವ ಯತ್ನಕ್ಕೆ ಸಂಬಂಧಿಸಿ ಆಡಿಯೋ ಕ್ಲಿಪ್ ಆಧರಿಸಿ ಈ ಎಫ್​ಐಆರ್​ಗಳುನ್ನು ದಾಖಲು ಮಾಡಲಾಗಿದೆ. ಈ ಆಡಿಯೋದಲ್ಲಿ ಕೇಳಿಬಂದಿರುವ ಸಂಜಯ್ ಜೈನ್​ರನ್ನು ವಿಚಾರಣೆಗೆ ಕರೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಬಂಧನ
ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಉರುಳಿಸಲು ಯತ್ನಿಸಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ರಾಜಸ್ಥಾನದ ವಿಶೇಷ ತನಿಖಾ ತಂಡ ಬಂಧಿಸಿದೆ. ಭರತ್ ಮಲಾನಿ ಮತ್ತು ಅಶೋಕ್ ಸಿಂಗ್ ಬಂಧಿತರು. ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಡಿಸಿಎಂ ಪೈಟಲ್ ನಡುವಿನ ಭಿನ್ನಮತವನ್ನು ಬಳಸಿಕೊಂಡು ಸರ್ಕಾರ ಉರುಳಿಸುವ ಬಗ್ಗೆ ಇವರು ತಂತ್ರಗಾರಿಕೆ ನಡೆಸುತ್ತಿದ್ದರು. ಶಾಸಕರನ್ನು ಖರೀದಿಸುವ ಕುರಿತು ದೂರವಾಣಿಯಲ್ಲಿ ಮಾತನಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೂವರು ಪಕ್ಷೇತರ ಶಾಸಕರ ವಿರುದ್ಧ ಎಸಿಬಿ ಈಗಾಗಲೇ ಪ್ರಕರಣ ದಾಖಲಿಸಿದೆ. ರಾಜ್ಯಸಭೆ ಚುನಾವಣೆ ವೇಳೆ ಇವರು ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಪ್ರಕರಣದ ಹಿನ್ನೆಲೆ
ಪೈಲಟ್ ಹಾಗೂ ಬೆಂಬಲಿತ ಶಾಸಕರು ಕಾಂಗ್ರೆಸ್ ಶಾಸಕಾಂಗ ಸಭೆಗೆ ಎರಡು ಬಾರಿ ಗೈರಾದ ಹಿನ್ನೆಲೆಯಲ್ಲಿ ಅವರ ಶಿಸ್ತು ಕ್ರಮ ಕೈಗೊಳ್ಳ ಲಾಗಿತ್ತು. ಪೈಲಟ್​ರನ್ನು ಡಿಸಿಎಂ, ರಾಜ್ಯ ಘಟಕದ ಮುಖ್ಯಸ್ಥರ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಂಡಾಯ ನಾಯಕರ ಶಾಸಕತ್ವ ರದ್ದು ಮಾಡಬೇಕು ಎಂದು ಪಕ್ಷದ ಮುಖ್ಯ ಸಚೇತಕರು ಸ್ಪೀಕರ್​ಗೆ ಮನವಿ ಮಾಡಿದ್ದರು.
ಟ್ರೋಲ್​ ಆಗುವ ಬಗ್ಗೆ ಮೊದಲೇ ಗೊತ್ತಿತ್ತಂತೆ: ಹೋಟೆಲ್​ ಮಾಲೀಕ-ಪ್ರತಾಪ್​ ನಡುವೆ ನಡೆದಿತ್ತು ರೋಚಕ ಮಾತುಕತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
