ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿಕೊಂಡಿರುವ ಎಎಪಿ ಪಕ್ಷದ ಅಧ್ಯಕ್ಷ ಅರವಿಂದ್​ ಕೇಜ್ರಿವಾಲ್​ ಭಾನುವಾರದಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬೇರೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಾಗಲೀ ಅಥವಾ ರಾಜಕಾರಣಿಗಾಗಲೀ ಆಹ್ವಾನ ನೀಡಿಲ್ಲವೆಂದು ಪಕ್ಷ ಸ್ಪಷ್ಟಪಡಿಸಿದೆ.
ಎರಡನೆಯ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಅರವಿಂದ್​ ಕೇಜ್ರಿವಾಲ್​ ತಮ್ಮನ್ನು ದೆಹಲಿಯ ಮಗ ಎಂದು ಕರೆದುಕೊಂಡಿದ್ದಾರೆ. ಹಾಗಾಗಿ ಕೇಜ್ರಿವಾಲ್​ ಮೇಲೆ ನಂಬಿಕೆ ಇಟ್ಟು ಮತ ನೀಡಿದ ದೆಹಲಿಯ ಸರ್ವ ಜನರಿಗೂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸ್ವಾಗತ ಕೋರುವುದಾಗಿ ಪಕ್ಷದ ವಕ್ತಾರ ಗೋಪಾಲ್​ ರೈ ತಿಳಿಸಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಅವರು, “ಬೇರೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಳನ್ನಾಗಲೀ ಅಥವಾ ರಾಜಕಾರಣಿಗಳನ್ನಾಗಲೀ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ. ದೆಹಲಿಯ ಪ್ರತಿ ನಾಗರಿಕರಿಗೂ ಕಾರ್ಯಕ್ರಮಕ್ಕೆ ಬಂದು ಅವರ ಮಗ/ಸಹೋದರರಾಗಿರುವ ಕೇಜ್ರಿವಾಲ್​ಗೆ ಹರಸಲು ಸ್ವಾಗತಿಸಲಾಗಿದೆ.” ಎಂದು ತಿಳಿಸಿದ್ದಾರೆ.
ಭಾನುವಾರದಂದು ದೆಹಲಿಯಲ್ಲಿರುವ ರಾಮ್​ಲೀಲಾ ಮೈದಾನದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅರವಿಂದ್​ ಕೇಜ್ರಿವಾಲ್​ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟ ಪಟ್ಟಿಯಲ್ಲಿ ಬಹುತೇಕ ಹಳೆಯ ಸಚಿವರ ಹೆಸರೇ ಇರಲಿದೆ ಎಂದು ಹೇಳಲಾಗಿದೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
