ನವದೆಹಲಿ:ಮಣಿಪುರದಲ್ಲಿ ಸಂಭವಿಸಿದ ಜನಾಂಗೀಯ ಘರ್ಷಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಆಗ್ರಹಿಸಿ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಲೋಕಸಭೆಯಲ್ಲಿ ಸೋಲುಂಟಾಗಿದೆ.
ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಪ್ರಸ್ತಾವನೆಯನ್ನು ಮತಕ್ಕೆ ಹಾಕಲಾಯಿತು. ಧ್ವನಿ ಮತದ ಮೂಲಕ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಯಿತು. ಪ್ರಸ್ತಾವನೆಯನ್ನು ಮತಕ್ಕೆ ಹಾಕುವ ಮುನ್ನವೇ ವಿಪಕ್ಷಗಳು ಸಭಾತ್ಯಾಗ ಮಾಡಿದ್ದವು.
#WATCH| No Confidence Motion defeated in the Lok Sabha through voice vote.https://t.co/hRwQT75Z6npic.twitter.com/SfPOzCEFNO
ಇದನ್ನೂ ಓದಿ:VIDEO| ವಿರೋಧ ಪಕ್ಷಗಳು ದೇಶದ ಜನತೆಗಿಂತ ಅಧಿಕಾರದ ಬಗ್ಗೆ ಹೆಚ್ಚಿಗೆ ಚಿಂತಿಸುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ
ವಿಪಕ್ಷಗಳ ಸಭಾತ್ಯಾಗ ಮಾಡಿದ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರಿಗೆ ಬಹುಶಃ ನನ್ನ ಮಾತುಗಳನ್ನು ಕೇಳಲು ತಾಳ್ಮೆ ಇಲ್ಲ ಎಂದು ಕಾಣುತ್ತದೆ. ಅವರು ಪ್ರತಿಬಾರಿಯೂ ನಮ್ಮ ಮೇಲೆ ಆರೋಪಗಳನ್ನು ಮಾಡಿ ಓಡಿ ಹೋಗುತ್ತಾರೆ. ವಿಪಕ್ಷಗಳು ತಮ್ಮ ಮೈತ್ರಿಕೂಟದ ಹೆಸರನ್ನು INDIA ಎಂದು ಬದಲಾಯಿಸಿದ ತಕ್ಷಣ ಅಧಿಕಾರಕ್ಕೇರುತ್ತೇವೆ ಎಂದುಕೊಂಡಿದ್ದಾರೆ.
ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಕುರಿತು ಒಂದೂವರೆ ಘಂಟೆಗಳಿಗು ಹೆಚ್ಚು ಕಾಲ ಸಂಸತ್​ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ INDIA ಮೃತ್ರಿಕೂಟ, ಕಾಂಗ್ರೆಸ್​ ನಾಯಕರಿಗೆ ತಮ್ಮ ಬಾಷಣದುದ್ದಕ್ಕೂ ಚಾಟಿ ಬೀಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
