ನವದೆಹಲಿ:ಲಡಾಖ್​ನ ವಾಸ್ತವ ಗಡಿರೇಖೆಯಲ್ಲಿ ಚೀನಾದೊಂದಿಗೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸರ್ಕಾರದ ಉನ್ನತಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ವೈಟ್​ಹೌಸ್​ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​, ಲಡಾಖ್​ ಉದ್ವಿಗ್ನ ಪರಿಸ್ಥಿತಿ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ್ದೇನೆ. ಚೀನಾದ ಜಗಳಗಂಟ ಮನೋಭಾವದ ಬಗ್ಗೆ ಅವರು ತುಂಬಾ ಬೇಸರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ವಿಗ್ನತೆ ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಪುನರುಚ್ಚರಿಸಿದ್ದಾಗಿ ಹೇಳಿದ್ದರು.
ಆದರೆ, ಈ ವಿಷಯವನ್ನು ಅಲ್ಲಗಳೆದಿರುವ ಸರ್ಕಾರದ ಉನ್ನತಾಧಿಕಾರಿಗಳು, ಉಭಯ ನಾಯಕರು ಏಪ್ರಿಲ್​ 4ರಂದು ಮಾತುಕತೆ ನಡೆಸಿದ್ದೇ ಕೊನೆ. ಆ ಸಂದರ್ಭದಲ್ಲಿ ಹೈಡ್ರೋಕ್ಲೋರೋಕ್ವೀನ್​ ಮಾತ್ರೆಗಳನ್ನು ಸರಬರಾಜು ಮಾಡುವ ವಿಷಯಕ್ಕೆ ಮಾತುಕತೆ ಸೀಮಿತವಾಗಿತ್ತು. ಆನಂತರದಲ್ಲಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕಕ್ಕೂ ಮಿಡತೆಗಳು ದಾಂಗುಡಿ ಇಡುವುದು ಖಚಿತ: ಕೇಂದ್ರದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
