ನವದೆಹಲಿ:ಕರೊನಾ ಸಂಕಟದ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಗಳು ಮತ್ತು ಖಾಸಗಿ ಸಂಸ್ಥೆಗಳು ತಮ್ಮ ಸಿಬ್ಬಂದಿಯ ವೇತನವನ್ನು ಕಡಿತಗೊಳಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ತನ್ನ ಸಿಬ್ಬಂದಿಗೆ ಪೂರ್ಣ ಪ್ರಮಾಣದ ವೇತನ ಪಾವತಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿ, ಟ್ವೀಟ್​ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಸರ್ಕಾರದ ಯಾವುದೇ ವರ್ಗದ ಸಿಬ್ಬಂದಿಯ ವೇತನವನ್ನು ಕಡಿತಗೊಳಿಸಲಾಗಿಲ್ಲ. ಅವರಿಗೆ ಪೂರ್ಣ ಪ್ರಮಾಣದ ವೇತನ ಪಾವತಿಸಲಾಗಿದೆ ಎಂದು ಹೇಳಿದ್ದಾರೆ. ತನ್ಮೂಲಕ ಅವರು ಈ ಬಗ್ಗೆ ಹಬ್ಬಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ:ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂಗಳ ಸಭೆಯಲ್ಲಿ ಮಮತಾ ಕ್ಯಾತೆ
ಸದ್ಯಕ್ಕೆ ಕೇಂದ್ರ ಸರ್ಕಾರಿ ನೌಕರರು ಮತ್ತು ಸಿಬ್ಬಂದಿಯ ವೇತನ ಕಡಿತಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರಕ್ಕಿಲ್ಲ. ಈ ಕುರಿತು ಕೆಲ ಮಾಧ್ಯಮಗಳಲ್ಲಿ ಶೇ.20 ವೇತನ ಕಡಿಗೊಳಿಸಿರುವುದಾಗಿ ಪ್ರಸಾರವಾಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಈ ಮಾತು ಪಿಂಚಣಿಗೂ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
VIDEO | ಮೊಬೈಲ್​ ಕಳ್ಳರನ್ನು ಬೆನ್ನಟ್ಟಿ ಹಿಡಿದ ನಾಗರಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + five =
Remember me
