ಲಖನೌ:ಮದುವೆ ಸಮಯದಲ್ಲಿ ಟೊಯೋಟಾ ಫಾರ್ಚುನರ್ ಮತ್ತು ₹ 21 ಲಕ್ಷ ನಗದು ಸೇರಿದಂತೆ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ.
ಮೃತರನ್ನು ಕರಿಷ್ಮಾ ಎಂದು ಗುರುತಿಸಲಾಗಿದ್ದು, ಮೃತಳ ಸಹೋದರ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿ ವಿಕಾಸ್​ ಹಾಗೂ ಆತನ ತಂದೆ ಸೋಮ್​ಪಾಲ್​ನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಆರ್​ಸಿಬಿ-ಲಖನೌ ಪಂದ್ಯಕ್ಕೆ ಮಳೆ ಭೀತಿ; ಚಿನ್ನಸ್ವಾಮಿ ​ಅಂಗಳ ಯಾರಿಗೆ ಹೆಚ್ಚು ಸಹಕಾರಿ?
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, 2022ರ ಡಿಸೆಂಬರ್​ ತಿಂಗಳಲ್ಲಿ ಕರಿಷ್ಮಾ ಹಾಗೂ ವಿಕಾಸ್​ ವಿವಾಹವಾಗಿದ್ದರು. ಮದುವೆ ಸಮಯದಲ್ಲಿ 11 ಲಕ್ಷ ಮೌಲ್ಯದ ಚಿನ್ನ ಮತ್ತು ಎಸ್‌ಯುವಿಯನ್ನು ಉಡಗೊರೆಯಾಗಿ ನೀಡಲಾಗಿತ್ತು. ಕರಿಷ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ವಿಕಾಸ್​ ಕುಟುಂಬಸ್ಥರು ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸಿದ್ದು ರಾಜಿ ಸಂಧಾನ ನಡೆಸಿ 10 ಲಕ್ಷ ರೂಪಾಯಿ ಕೊಡಲಾಗಿತ್ತು.
ಇದಾದ ಕೆಲ ದಿನಗಳ ಬಳಿಕ ವಿಕಾಸ್​ ಕುಟುಂಬಸ್ಥರು ಹೊಸ ಫಾರ್ಚುನರ್​ ಕಾರು ಹಾಗೂ 21 ಲಕ್ಷ ರೂಪಾಯಿ ಹಣ ತರುವಂತೆ ಪೀಡಿಸಲು ಶುರು ಮಾಡಿದ್ದಾರೆ. ಇದಕ್ಕೆ ಕರಿಷ್ಮಾ ಒಪ್ಪದೇ ಇದ್ದಾಗ ಆಕೆಯ ಮೇಲೆ ವಿಕಾಸ್​ ಹಾಗೂ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದು, ಆಕೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕರಿಷ್ಮಾಳ ಸಹೋದರ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳಾದ ವಿಕಾಸ್​ ಹಾಗೂ ಆತನ ತಂದೆ ಸೋಮ್​ಪಾಲ್​ನನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳಾದ ತಾಯಿ ರಾಕೇಶ್, ಸಹೋದರಿ ರಿಂಕಿ ಸಹೋದರರಾದ ಸುನಿಲ್ ಮತ್ತು ಅನಿಲ್ ತಲೆಮಾರಿಸಿಕೊಂಡಿದ್ದು ಅವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 19 =
Remember me
