ಕಲ್ಕತ್ತ:ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಈಗಾಗಲೇ 4 ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ 4 ಹಂತ ಬಾಕಿ ಇವೆ. ಇದೇ ವೇಳೆ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳಿದ 4 ಹಂತದ ಮತದಾನವನ್ನು ಒಂದೇ ಸಾರಿ ಮುಗಿಸಲಾಗುತ್ತದೆ ಎಂಬ ಊಹಾಪೋಹಗಳು ಕಳೆದ ಎರಡು ದಿನಗಳಿಂದ ಚಾಲ್ತಿಯಲ್ಲಿದ್ದವು.
ಆದರೆ, ಈ ಊಹಾಪೋಹಗಳಿಗೆ ಕೇಂದ್ರ ಚುನಾವಣಾ ಆಯೋಗ ಇಂದು ತೆರೆ ಎಳೆದಿದೆ. ಉಳಿದ 4 ಹಂತದ ಮತದಾನಗಳು ನಿಗದಿಯಂತೆ ನಡೆಯಲಿವೆ ಯಾವುದೇ ಬದಲಾವಣೆ ಇಲ್ಲ ಎಂದಿದೆ.
ಅಲ್ಲದೇ ಕರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯುಕ್ತರು ಶುಕ್ರವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಎಲ್ಲರೂ ಕರೊನಾ ತಡೆಗಟ್ಟಲು ಆಯೋಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
It is certainly criminal negligence bordering on manslaughter on part of@ECISVEEPto mandate 8 phase election in WB in middle of worst pandemic.
Unbelievable that we are being put through this. Infections, deaths rising everyday.
— Mahua Moitra (@MahuaMoitra)April 15, 2021

ಇನ್ನು ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ 8 ಹಂತದ ಮತದಾನ ಇಟ್ಟಿರುವುದನ್ನು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರೊನಾ ಅಲೆ ಇರುವುದು ಗೊತ್ತಿದ್ದರೂ ಪಶ್ಚಿಮ ಬಂಗಾಳದಲ್ಲಿ 8 ಹಂತದ ಮತದಾನ ಇಟ್ಟಿರುವುದು ಅಪರಾಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಂಬಿ ನಾರಾಯಣನ್ ಗೂಢಚರ್ಯೆ ಪ್ರಕರಣ: ಸಿಬಿಐ ತನಿಖೆ ಮುಂದುವರೆಸಲು ಸುಪ್ರೀಂ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
