ನವದೆಹಲಿ:ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದೂರು ಹೇಳುವ ಒಂದೂ ಅವಕಾಶವನ್ನು ಬಿಡುವುದಿಲ್ಲ. ಇದೀಗ ದೇಶದ ಕೆಲವು ರಾಜ್ಯಗಳಿಗೆ ಕಲ್ಲಿದ್ದಲಿನ ಪೂರೈಕೆ ಕಡಿಮೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್​ ಕೂಡ ವಿದ್ಯುತ್​ ಉತ್ಪಾದಕ ಘಟಕಗಳಿಗೆ ಕೇಂದ್ರದಿಂದ ಕಲ್ಲಿದ್ದಲು ಪೂರೈಕೆ ಕಡಿಮೆ ಆಗಿ ದೆಹಲಿಗೆ ವಿದ್ಯುತ್​ ಅಭಾವ ಎದುರಾಗುವ ಚಿಂತಾಜನಕ ಸ್ಥಿತಿ ಇದೆ ಎಂದು ಹೇಳಿಕೆ ನೀಡಿದ್ದಾರೆ.
ಕೇಜ್ರಿವಾಲ್​ರ ಈ ಮಾತಿಗೆ ಪ್ರತಿಕ್ರಿಯೆ ಎಂಬಂತೆ ಕೇಂದ್ರ ಸರ್ಕಾರ ದೆಹಲಿಯ ವಿದ್ಯುತ್ ಬೇಡಿಕೆ ಮತ್ತು ಪೂರೈಕೆಗಳ ಬಗೆಗಿನ ಫ್ಯಾಕ್ಟ್​ಶೀಟ್​ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ವಿದ್ಯುತ್​ ಅಭಾವವಿಲ್ಲ, ವಿದ್ಯುತ್​ ಪೂರೈಕೆಯಲ್ಲಿ ಕಡಿತ ಉಂಟಾಗುತ್ತಿಲ್ಲ ಎಂದಿರುವ ಸರ್ಕಾರ, ದೆಹಲಿ ವಿದ್ಯುತ್​ ಸರಬರಾಜು ಕಂಪೆನಿಗಳು(ಡಿಸ್ಕಾಮ್ಸ್​) ನಗರದ ಪೀಕ್​ ಬೇಡಿಕೆಗೆ ತಕ್ಕಂತೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಾ ಬಂದಿವೆ ಎಂದಿದೆ.
ಇದನ್ನೂ ಓದಿ:ಪಹಣಿ ಹೆಸರು ಬದಲಾಯಿಸಲು ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
ಕೇಂದ್ರ ವಿದ್ಯುತ್​ ಸಚಿವಾಲಯ ಪ್ರಕಟಿಸಿರುವ ಫ್ಯಾಕ್ಟ್​ಶೀಟ್​ನಲ್ಲಿ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 10 ರವರೆಗಿನ ದೆಹಲಿಯ ವಿದ್ಯುತ್ ಪೂರೈಕೆ ಅಂಕಿಅಂಶಗಳನ್ನು ಒದಗಿಸಲಾಗಿದೆ. ಅ.10 ರಂದು ದೆಹಲಿಯ ವಿದ್ಯುತ್​ ಅಗತ್ಯ 96.2 ಎಂಯುಗಳಾಗಿದ್ದು, ಅಷ್ಟೂ ಪೂರೈಕೆಯಾಗಿದೆ. ಪೀಕ್​ ಬೇಡಿಕೆಯು 4536 ಮೆಗಾ ವಾಟ್​ಗಳಷ್ಟಿದ್ದರೆ, ಪೂರೈಕೆಯೂ 4536 ಮೆಗಾವಾಟ್​ನಷ್ಟೇ ಆಗಿದೆ ಎಂದು ಅಂಕಿಅಂಶಗಳು ತೋರಿಸಿವೆ.(ಏಜೆನ್ಸೀಸ್)
ಸಿದ್ದರಾಮಯ್ಯಂಗೆ ಪಾಠ ಕಲಿಸೋದೇ ನನ್ನ ಉದ್ದೇಶ ಎಂದ ಎಚ್​ಡಿಕೆ

ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ

ಸರಗಳ್ಳನನ್ನು ಬೆನ್ನಟ್ಟಿ ಹೋಗಿ ಹಿಡಿದ ಆಟೋ ಡ್ರೈವರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + five =
Remember me
