ಲಖನೌ:ಎರಡನೇ ಹಂತದ ಲಾಕ್​ಡೌನ್​ನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಹಾಗೇ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಗುರುವಾರದಿಂದ ಲಾಕ್​ಡೌನ್​ನಲ್ಲಿ ಸಡಲಿಕೆ ಮಾಡಲಾಗಿದೆ.
ಮೇ 3 ರಬಳಿಕವೂ ಲಾಕ್​ಡೌನ್​ನ್ನು ಸಂಪೂರ್ಣ ಹಿಂಪಡೆಯಲಾಗುವುದು ಅನುಮಾನ. ಈ ಮಧ್ಯೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಮುಖ ಆದೇಶವೊಂದನ್ನು ಪ್ರಕಟಿಸಿದ್ದಾರೆ. ಜೂನ್​ 30ರವರೆಗೂ ರಾಜ್ಯದಲ್ಲಿ ಸಾರ್ವಜನಿಕವಾಗಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ.
ಏ.14ರಂದು ಮೊದಲ ಹಂತದ ಲಾಕ್​ಡೌನ್​ ಮುಗಿಯುವುದಕ್ಕೂ ಮೊದಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ನಡೆಸಿ, ಚರ್ಚೆ ನಡೆಸಿದ್ದು. ಅದಾದ ಬಳಿಕ ಮೇ 3ರವರೆಗೆ ಲಾಕ್​ಡೌನ್​ ಅವಧಿಯನ್ನು ವಿಸ್ತರಿಸಿದ್ದರು. ಸೋಮವಾರ (ಏಪ್ರಿಲ್​ 27)ರಂದು ಮತ್ತೊಮ್ಮೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಮೂಲಕ ಚರ್ಚೆ ನಡೆಸಲಿದ್ದಾರೆ.
ಈ ಬೆನ್ನಲ್ಲೇ ಶುಕ್ರವಾರ ಸಚಿವ ಸಂಪುಟದ ಸಭೆ ನಡೆಸಿದ್ದ ಯೋಗಿ ಆದಿತ್ಯನಾಥ್​ ಅವರು, ಜೂನ್​ 30ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನೂ ನಡೆಸುವಂತಿಲ್ಲ. ಗುಂಪುಗೂಡುವಂತಿಲ್ಲ ಎಂದು ಆದೇಶ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ಯೋಗಿ ಹೇಳಿದ್ದಾರೆ.ಉತ್ತರ ಪ್ರದೇಶದಲ್ಲಿ ಕರೊನಾದಿಂದ ಮೃತಪಟ್ಟವರ ಸಂಖ್ಯೆ ಇಂದು ಬೆಳಗ್ಗೆ 25ಕ್ಕೆ ಏರಿದೆ. (ಏಜೆನ್ಸೀಸ್​)
ಕಿಡ್ನಿ ವೈಫಲ್ಯದಿಂದ ದೆಹಲಿ ಝೂನಲ್ಲಿ ಮೃತಪಟ್ಟ ಬಿಳಿಹುಲಿಗೂ ಕರೊನಾ ಸೋಂಕಿತ್ತಾ? ಪರೀಕ್ಷಾ ವರದಿಯಲ್ಲಿ ಏನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
