ನವದೆಹಲಿ: ವೀರ ಸಾವರ್ಕರ್ ಅವರು ಬ್ರಿಟಿಷ್ ಆಡಳಿತಕ್ಕೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿರುವ ದಯಾ ಅರ್ಜಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ.
ಹಿಂದು ರಾಷ್ಟ್ರೀಯ ನಾಯಕ ವಿನಾಯಕ ದಾಮೋದರ ಸಾವರ್ಕರ್​ ಅವರು ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ್ದ ದಯಾ ಅರ್ಜಿಯನ್ನು ಅಂಡಮಾನ್- ನಿಕೋಬಾರ್ ಸೆಲ್ಯುಲರ್ ಜೈಲ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇರಿಸಿಲ್ಲ. ಅಂತಹ ಯಾವುದೇ ದಾಖಲೆಗಳು ಕಲೆ ಮತ್ತು ಸಂಸ್ಕೃತಿ ಇಲಾಖೆಯ ಬಳಿ ಇಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ರಾಜ್ಯ ಸಭೆ ಸದಸ್ಯರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.
ಅಂಡಮಾನ್​-ನಿಕೋಬಾರ್​ನ ಕಲೆ ಮತ್ತು ಸಂಸ್ಕೃತಿ ನಿರ್ದೇಶನಾಲಯದಿಂದ ಪಡೆದ ಮಾಹಿತಿ ಪ್ರಕಾರ, ಅಂತಹ ಯಾವುದೇ ದಯಾ ಅರ್ಜಿಯನ್ನು ಅಲ್ಲಿ ಪ್ರದರ್ಶನಕ್ಕೆ ಇರಿಸಿಲ್ಲ. ಅಲ್ಲದೆ, ಇದುವರೆಗೆ ಲಭ್ಯ ದಾಖಲೆಗಳಲ್ಲಿ ಆ ರೀತಿಯ ದಯಾ ಅರ್ಜಿಯ ದಾಖಲೆಗಳು ಇಲ್ಲ ಎಂದು ಅಂಡಮಾನ್ -ನಿಕೋಬಾರ್ ಆಡಳಿತವೂ ಸ್ಪಷ್ಟಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 17 =
Remember me
