ನವದೆಹಲಿ:ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಎಎಪಿ ನಾಯಕ ಸಂಜಯ್​ ಸಿಂಗ್​ ಅವರಿಗೆ ದೆಹಲಿ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.
ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸ್ವರ್ಣಕಾಂತ ಶರ್ಮಾ ಅವರಿದ್ಧ ಏಕಸದಸ್ಯ ಪೀಠವು ಯಾವ ಆಧಾರದ ಮೇಲೆ ನಿಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.
Delhi HC dismisses AAP MP Sanjay Singh's plea against his arrest, remandRead@ANIStory |https://t.co/4W2Sfn0aiH#SanjaySingh#AAP#HighCourtDelhipic.twitter.com/4eiBukOwk2
ಇದನ್ನೂ ಓದಿ:ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ; ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ ಪಾಂಡ್ಯ ಔಟ್
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ್​ ಸಂಜಯ್​ ಸಿಂಗ್​ರನ್ನು ಜಾರಿ ನಿರ್ದೇಶನಾಲಯ ಅಕ್ಟೋಬರ್ 4ರಂದು ವಶಕ್ಕೆ ಪಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂದು ಪ್ರಶ್ನಿಸಿ ಸಂಜಯ್ ಸಿಂಗ್ ಕಳೆದ ವಾದ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದರಲ್ಲಿ ಸಂಜಯ್​ ಸಿಂಗ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವು ವ್ಯಾಪಾರಿಗಳು ಹಾಗೂ ಮದ್ಯ ತಯಾರಿಕರಿಂದ ಸಿಂಗ್​ ಕಮಿಷನ್ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ತನಿಖಾ ಸಂಸ್ಥೆಗಳು ವಾದ ಮಂಡಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seventeen =
Remember me
