ನವದೆಹಲಿ:2022 ರ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಾಗಿ ಯುಪಿಎಸ್​ಸಿಗೆ ಸಲ್ಲಿಸಿದ ಅರ್ಜಿಯಲ್ಲಿ ‘ಸುಳ್ಳು ದಾಖಲೆ ನೀಡಿ ಒಬಿಸಿ ಮತ್ತು ಅಂಗವಿಕಲ ವ್ಯಕ್ತಿ ಕೋಟಾ ಪ್ರಯೋಜನಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಐಎಎಸ್​ ಪ್ರೊಬೇಷನರ್ ಮಾಜಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ಇದನ್ನೂ ಓದಿ:ಭಾರೀ ಮಳೆಗೆ ತತ್ತರಿಸಿ ಹೋದ ಉತ್ತರಾಖಂಡ 12 ಮಂದಿ ಸಾವು, ಜನಜೀವನ ಅಸ್ತವ್ಯಸ್ತ
ಯುಪಿಎಸ್​ಸಿ ಅಲ್ಲಿರುವ ಯಾರಾದರೂ ಪೂಜಾ ಖೇಡ್ಕರ್ ಅವರಿಗೆ ಸಹಾಯ ಮಾಡಿದ್ದಾರೆಯೇ? ಎಂಬುದರ ಬಗ್ಗೆ ದಹೆಲಿ ಪೊಲೀಸರು ಆಳವಾಗಿ ಮತ್ತು ನ್ಯಾಯಯುತವಾಗಿ ತನಿಖೆ ಮಾಡಬೇಕು ಎಂದು ತನಿಖಾ ಏಜೆನ್ಸಿಗೆ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಅವರು ಆದೇಶ ನೀಡಿದ್ದಾರೆ.
ಒಬಿಸಿ ಮಾಹಿತಿ ನೀಡಿದ ಆರೋಪದ ಮೇಲೆ ಕೇಂದ್ರ ಲೋಕಸೇವಾ ಆಯೋಗ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ರದ್ದುಗೊಳಿಸಿದೆ. ಅದರ ಜೊತೆಗೆ ಭವಿಷ್ಯದ ಎಲ್ಲಾ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಅವರನ್ನು ಡಿಬಾರ್ ಮಾಡಿದೆ.
ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಶೋಷಣೆಯ ದೂರು ಸಲ್ಲಿಸಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ, ನನ್ನನ್ನು ಬಂಧಿಸಿ ಬೆದರಿಕೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಪೂಜಾ ಖೇಡ್ಕರ್ ಅವರು ಸಲ್ಲಿಸಿರುವ ಜಾಮೀನು ಅರ್ಜಿ ಕುರಿತ ಆದೇಶವನ್ನು ಗುರುವಾರ ಪ್ರಕಟಿಸುವ ದೆಹಲಿಯ ನ್ಯಾಯಾಲಯ ತಿಳಿಸಿದೆ.
ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಷಿಕ್ಯೂಸನ್, ಪೂಜಾ ಒಂದು ಪ್ರಬಲ ವ್ಯವಸ್ಥೆಗೆ ವಂಚನೆ ಮಾಡಿದ್ದಾರೆ. ಇದರಿಂದ ಅವರನ್ನು ಬಂಧಿಸಿ ವಿಚಾರಣೆ ನಡೆಸುವುದು ಸೂಕ್ತ ಎಂದು ವಾದ ಮಾಡಿದ್ದರು. ಅರ್ಜಿದಾರರ ಹಿನ್ನೆಲೆ ಬಲಿಷ್ಠವಾಗಿದ್ದು ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸಬಹುದು ಎಂದು UPSC ಪರ ವಕೀಲರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು. ಪ್ರತಿವಾದ ಆಲಿಸಿದ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಅವರು ಅದೇಶವನ್ನು ಕಾಯ್ದಿರಿಸಿದರು.
ಭಾರತಕ್ಕೆ ಅಕ್ರಮ ಪ್ರವೇಶ: ಇಬ್ಬರು ಚೀನಾ ಪ್ರಜೆಗಳ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
