ನವದೆಹಲಿ:ಕರೊನಾ ವೈರಸ್​ ನಿಯಂತ್ರಣ ತೀರ ಕಷ್ಟವಾಗುತ್ತಿದೆ. ದಿನದಲ್ಲಿ ಒಂದಷ್ಟು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಮಧ್ಯೆ ವಿದೇಶಗಳಿಂದ ಬರುವವರ ಮೇಲೆ ನಿಗಾ ಇಡುವುದೂ ಒಂದು ಸಾಹಸವೇ ಆಗುತ್ತಿದೆ. ಕರೊನಾ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ.
ಮಾ.22ರಿಂದ ಅಂತಾರಾಷ್ಟ್ರೀಯ ವಿಮಾನಗಳ ಪ್ರವೇಶಕ್ಕೆ ಭಾರತದಲ್ಲಿ ನಿರ್ಭಂಧ ಹೇರಲಾಗಿದೆ. ಭಾನುವಾರ (ಮಾ.22)ದಿಂದ ಒಂದು ವಾರಗಳ ಕಾಲ ಯಾವುದೇ ಅಂತಾರಾಷ್ಟ್ರೀಯ ವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗಲು ಅನುಮತಿ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇಂದು ಸಂಜೆ 8ಗಂಟೆಗೆ ಕರೊನಾ ವೈರಸ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಡೀ ಭಾರತ ಲಾಕ್ ಡೌನ್​ (ಸಂಪೂರ್ಣ ಬಂದ್​) ಆಗುವುದನ್ನು ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಘೋಷಿಸಲಿದ್ದಾರೆ ಎಂಬಂತಹ ಮಾತುಗಳೂ ಕೇಳಿಬರುತ್ತಿವೆ. ಆದರೆ ಭಾರತ ಲಾಕ್​ ಡೌನ್ ಆಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿಯವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ಮೊದಲೇ ಕೇಂದ್ರ ಸರ್ಕಾರದಿಂದ ಪ್ರಕಟಣೆಯೊಂದು ಹೊರಬಿದ್ದಿದೆ. ಉದ್ಯೋಗಿಗಳು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ (ವರ್ಕ್​ ಫ್ರಾಮ್​ ಹೋಂ) ಮಾಡಿ. 10ವರ್ಷದ ಒಳಗಿನ ಮಕ್ಕಳು ಮತ್ತು 65 ವರ್ಷ ಮೇಲ್ಪಟ್ಟ ವೃದ್ಧರು ಮನೆಯಿಂದ ಹೊರಗೆ ಬರಬೇಡಿ ಎಂದು ತಿಳಿಸಿದೆ.
ಕರೊನಾ ವೈರಸ್​ ಇಂದು ಹೊಸದಾಗಿ 18 ಜನರಲ್ಲಿ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 173ಕ್ಕೆ ಏರಿದೆ. ಜಾಗತಿಕ ಮಹಾಮಾರಿಯಾಗಿರುವ ಕರೊನಾ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. (ಏಜೆನ್ಸೀಸ್​)
ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟ ಇಂಡಿಗೋ: ಕರೊನಾ ಕಾರಣ ವೇತನದಲ್ಲಿ ಶೇಕಡ 25 ಕಡಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eleven =
Remember me
