ನವದೆಹಲಿ:ಮನೆ ಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ಇನ್ನು ಮುಂದೆ ಗ್ರಾಹಕರ ಬ್ಯಾಂಕ್​ ಖಾತೆಗೆ ಜಮಾ ಆಗುವುದಿಲ್ಲ. ಕಾರಣ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್​ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ತೈಲೋತ್ಪನ್ನಗಳಿಂದ ಬರಬೇಕಾದ ತೆರಿಗೆ ಆದಾಯ ಕುಸಿಯದಂತಿರಲು ಸರ್ಕಾರ ನಿಯಮಿತವಾಗಿ ಪೆಟ್ರೋಲ್​, ಡೀಸೆಲ್​ ಹಾಗೂ ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಬಂದಿದೆ.
ಇದನ್ನೂ ಓದಿ;ವಾಹನಗಳಿಗೆ ಫಾಸ್ಟ್ಯಾಗ್​ ಇಲ್ಲದಿದ್ದರೆ ಥರ್ಡ್​ ಪಾರ್ಟಿ ಇನ್ಶುರೆನ್ಸ್​ ಸಿಗೋದಿಲ್ಲ…!
ಈ ಕಾರಣದಿಂದಾಗಿ ಸದ್ಯ ಗೃಹ ಬಳಕೆಗೆ ನೀಡಲಾಗುತ್ತಿರುವ ಸಬ್ಸಿಡಿ ಅಡುಗೆ ಅನಿಲದ ದರ ಹಾಗೂ ಮಾರುಕಟ್ಟೆಯ ಬೆಲೆ ಒಂದೇ ಆಗಿದೆ. ಈ ಕಾರಣದಿಂದಾಗಿ ಸಬ್ಸಿಡಿ ನೀಡುವುದನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸೆ.1ರಂದು ಸಬ್ಸಿಡಿರಹಿತ ಹಾಗೂ ಸಬ್ಸಿಡಿಸಹಿತ ಅಡುಗೆ ಅನಿಲದ 14.2 ಕೆಜಿ ಸಿಲಿಂಡರ್​ ಬೆಲೆ 594 ರೂ. ಆಗಿತ್ತು. ಹೀಗಾಗಿ ವ್ಯತ್ಯಾಸದ ಹಣವನ್ನು ಗ್ರಾಹಕರ ಖಾತೆಗೆ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಈ ನಿರ್ಧಾರದಿಂದಾಗಿ ಸರ್ಕಾರಕ್ಕೆ ಕನಿಷ್ಠ 20 ಸಾವಿರ ಕೋಟಿ ರೂ.ಗಳ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
