ನವದೆಹಲಿ:ಪ್ರತಿದಿನ 24 ಸಾವಿರ ಕ್ಯೂಸೆಕ್​ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.
ಕರ್ನಾಟಕ ಇಲ್ಲಿಯವರೆಗೂ ಬಿಡುಗಡೆ ಮಾಡಿರುವ ನೀರಿನ ಪ್ರಮಾಣದ ವರದಿಯನ್ನು ಸಲ್ಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ(CMWA) ಬಿ.ಆರ್. ಗವಾಯಿ, ಪಿ. ಎಸ್. ನರಸಿಂಹ, ಬಿ. ಕೆ. ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಸೂಚಿಸಿದೆ.
ನಾವು ಈ ವಿಚಾರವಾಗಿ ಹೆಚ್ಚಿನ ಪರಿಣಿತಿಯನ್ನು ಹೊಂದಿಲ್ಲದ ಕಾರಣ ಮುಂದಿನ 15 ದಿನಗಳ ಕಾಲ ನೀರು ಹರಿಸಬೇಕಾಗಿರುವ ಕುರಿತು ಪ್ರಾಧಿಕಾರ ನಿರ್ಧರಿಸುತ್ತದೆ. ಸೋಮವಾರ ಈ ಸಂಬಂಧ ಸಭೆ ಕರೆಯಲಾಗಿದ್ದು, ಆ ನಂತರ ವರದಿ ಸಲ್ಲಿಸಲಾಗುವುದು ಎಂದು ಸಾಲಿಸಿಟರ್​​ ಜನರಲ್​ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ನೀರು ಹರಿಸುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಇಲ್ಲವೇ ಎಂಬುದರ ಕುರಿತು ಪ್ರಾಧಿಕಾರ ತನ್ನ ವರದಿ ಸಲ್ಲಿಸುವುದು ಸೂಕ್ತ. ಮುಂದಿನ ಶುಕ್ರವಾರದೊಳಗೆ ಪ್ರಾಧಿಕಾರವು ತನ್ನ ವರದಿಯನ್ನು ಸಲ್ಲಿಸಬೇಕು ಎಂದು ತ್ರಿಸದಸ್ಯ ಪೀಠ ಸೂಚಿಸಿದೆ.
Supreme Court asks the Cauvery Water Disputes Tribunal (CWDT), which is meeting on 28th August, to decide the release of water for the next fortnight in the Cauvery water-sharing dispute between Karnataka and Tamil Nadu.Supreme Court says it doesn’t possess any expertise on…
ಇದನ್ನೂ ಓದಿ:ಪತಿಯನ್ನು ಭೇಟಿಯಾಗಲು ಭಾರತಕ್ಕೆ ಬಂದಿದ್ದ ಬಾಂಗ್ಲಾ ಮಹಿಳೆಗೆ ಕಾದಿತ್ತು ಶಾಕ್​!
ಈ ವರ್ಷ ಉತ್ತಮ ಮಳೆಯಾಗಿದ್ದು, ನೀರಿಗೆ ಯಾವುದೇ ರೀತಿಯ ಸಂಕಷ್ಟವಿಲ್ಲ ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್​ ರೋಹ್ಟಗಿ ವಾದ ಮಂಡಿಸಿದ್ದಾರೆ. ಹಾಗಾಗಿ ಪ್ರತಿದಿನ 24 ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಬೇಕು ಎಂದು ತ್ರಿಸದಸ್ಯ ಪೀಠದ ಮುಂಭಾಗ ಆಗ್ರಹಿಸಿದ್ದಾರೆ.
ಕರ್ನಾಟಕ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್​ ದಿವಾನ್​ ಆಗಸ್ಟ್​ 12ರಿಂದ ಅನ್ವಯವಾಗುವಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 10 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ CMWA ತೆಗೆದುಕಕೊಂಡಿರುವ ನಿರ್ಧಾರವನ್ನು ಪರಿಶೀಲಿಸುವಂತೆ ಕೋರಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಲಯವು ಪ್ರತಿನಿತ್ಯ 24 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್​ ಅರ್ಜಿಯನ್ನು ನಿರಾಕರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
