ಚೆನ್ನೈ:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಾವು ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪು ಅಂತಿಮ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ.
ಕಾವೇರಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳುನಾಡು ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಮಾತಿಲ್ಲ ಎಂದಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮಧ್ಯಸ್ಥಿಕೆಗೆ ಕರ್ನಾಟಕ ಸರ್ಕಾರ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಾತನಾಡುವುದರಲ್ಲಿ ಯಾವುದೇ ಪ್ರಯೋಜವಿಲ್ಲ. ಇಷ್ಟು ವರ್ಷಗಳಿಂದ ಮಾತುಕತೆ ನಡೆಸಿದ್ದರು ಯಾವುದೇ ಫಲ ಕೊಟ್ಟಿಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ನೀರು ಹಂಚಿಕೆ ವಿಚಾರವಾಗಿ ಕಾವೇರಿ ಜಲವಿವಾದ ನ್ಯಾಯಮಂಡಳಿಯನ್ನು ಸಂಪರ್ಕಿಸಬೇಕಾಯಿತು. ಅಂತಿಮವಾಗಿ ತೀರ್ಪು ನಮ್ಮ ಪರ ಬಂತು ಎಂದಿದ್ದಾರೆ.
ಇದನ್ನೂ ಓದಿ:ಒಬಿಸಿ ಕೋಟಾ ಇಲ್ಲದೇ ಮಹಿಳಾ ಮೀಸಲಾತಿ ಮಸುದೆ ಅಪೂರ್ಣ: ರಾಹುಲ್​ ಗಾಂಧಿ
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮವಾಗಿದ್ದು, ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ.
ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನಿರು ಹರಿಸುವಂತೆ ಆದೇಶಿಸಿರುವ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿಚಾರವಾಗಿ ಸುಪ್ರೀಂ ಕೋರ್ಟ್​ ಮದ್ಯಪ್ರವೇಶಿಸಲು ನಿರಾಕರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 15 =
Remember me
