ನವದೆಹಲಿ:ಮೇ 3ರ ನಂತರವೂ ಲಾಕ್​ಡೌನ್ ವಿಸ್ತರಿಸುವ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಷರತ್ತುಬದ್ಧವಾಗಿ ಕೆಲ ಸಡಿಲಿಕೆಗಳಿಗೆ ಅವಕಾಶ ನೀಡಲಾಗುವುದೆಂದು ಮೂಲಗಳು ತಿಳಿಸಿವೆ.
ಮೇ 3ರಿಂದ ರೈಲು, ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಯಿಲ್ಲ. ಆದರೆ ನಗರದೊಳಗೇ ಸಂಚಾರಕ್ಕೆ ಅನುಮತಿ ನೀಡುವ ಸಂಭವವಿದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಈಗ ಜೀವನ ಶೈಲಿಯ ಭಾಗವಾಗಿರುವುದರಿಂದ ಮನೆಯಿಂದ ಹೊರ ಹೋಗುವವರು ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.
ಮದುವೆಗಳು ಹಾಗೂ ಧಾರ್ವಿುಕ ಸಮಾರಂಭಗಳಲ್ಲಿ ಹೆಚ್ಚು ಜನರು ಭಾಗವಹಿಸುವುದಕ್ಕೆ ಅವಕಾಶ ನೀಡಲು ಕೂಡ ಸರ್ಕಾರ ಚಿಂತನೆ ನಡೆಸಿಲ್ಲ. ಜೀವನಾವಶ್ಯಕ ವಸ್ತುಗಳ ಮಾರಾಟದ ಅಂಗಡಿಗಳು ಸಾಮಾಜಿಕ ಅಂತರ ನಿಯಮ ಪಾಲನೆಯೊಂದಿಗೆ ಕಾರ್ಯಾಚರಿಸಬಹುದಾಗಿದೆ.
ಮೇ 3ರವರೆಗೆ ಲಾಕ್​ಡೌನ್ ನಿಯಮಗಳನ್ನು ಸಡಿಲಗೊಳಿಸದಿರಲು ಕರ್ನಾಟಕ, ತಮಿಳುನಾಡು, ತೆಲಂಗಾಣ, ಪಂಜಾಬ್ ಮತ್ತು ದೆಹಲಿ ಈಗಾಗಲೇ ನಿರ್ಧರಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
