ನವದೆಹಲಿ:ದೆಹಲಿ ಇಂದು ಶಾಂತವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂಸಾಚಾರದ ಯಾವ ಸುದ್ದಿಯೂ ಬಂದಿಲ್ಲ ಎಂದರು.
ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಗಿದೆ. ಇಂದು ದೆಹಲಿಯ ಎಲ್ಲ ಪ್ರದೇಶಗಳಲ್ಲಿ ಯಾವುದೇ ಆಹಿತಕರ ಘಟನೆ ನಡೆದಿಲ್ಲ. ಆದಷ್ಟು ಬೇಗ ದೆಹಲಿಯಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ನಮ್ಮ ಉದ್ದೇಶ ಎಂದರು.
ದೆಹಲಿ ಸಂತ್ರಸ್ಥರಿಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಘೋಷಿಸಿದ ಪರಿಹಾರಕ್ಕೆ (ತಲಾ 25 ಸಾವಿರ ರೂ.) ಈವರೆಗೆ ಅಂದಾಜು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವರಿಗೆ ನಾಳೆ ಹಣ ದೊರೆಯುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಗಲಭೆಯಲ್ಲಿ ಬೀದಿ ದೀಪಗಳು ಹಾಳಾಗಿದ್ದು ಅವುಗಳ ರಿಪೇರಿಗೆ ಕ್ರಮ ಕೈಗೊಳ್ಳಲಾಗಿದೆ. ಹಿಂಸಾಚಾರದಲ್ಲಿ ಸರ್ಕಾರಿ ಶಾಲೆಗಳಿಗೆ ಯಾವುದೇ ಹಾನಿಯಾಗಿಲ್ಲ. ಈ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅವುಗಳನ್ನು ನಂಬಬಾರದು ಎಂದು ಮನವಿ ಮಾಡಿಕೊಂಡರು.
ಗಲಭೆಯಲ್ಲಿ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಉಳಿಯಲು ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲೇ ತಂಗಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 1 =
Remember me
