ನವದೆಹಲಿ:ನಾಮಪತ್ರ ಸಲ್ಲಿಕೆಗೆ ಇನ್ನೂ ಕೇವಲ ಮೂರು ದಿನ ಬಾಕಿ ಇರುವ ಅಮೇಠಿ ಮತ್ತು ರಾಯ್​ ಬರೇಲಿ ಕ್ಷೇತ್ರಗಳಗಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳು ಯಾರು ಎನ್ನುವುದು ಗುಟ್ಟಾಗಿದ್ದು ಕುತೂಹಲ ತೀವ್ರಗೊಂಡಿದೆ. ಈ ಕುರಿತು ಮುಂದಿನ 20 ರಿಂದ 30 ಗಂಟೆಯೊಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಕಾಂಗ್ರೆಸ್​ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ:SC, ST, OBC ಮೀಸಲಾತಿ ರದ್ದತಿ? ಅಮಿತ್ ಷಾ ಸ್ಫೋಟಕ ಹೇಳಿಕೆ..!
ಅಮೇಠಿ ಮತ್ತು ರಾಯ್​ ಬರೇಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಮುಂದಿನ 24-30 ತಾಸಿನೊಳಗೆ ಕಾಂಗ್ರೆಸ್ ಅಧ್ಯಕ್ಷರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಿದೆ ಎಂದು ಕಾಂಗ್ರೆಸ್​ ಪ್ರಧಾನಿ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ನಿರ್ಧಾರ ತೆಗೆದುಕೊಳ್ಳಲು ವಿಳಂಬ ಏಕೆ? ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಭಯವಿದೆಯೇ ಎಂ ಪ್ರಶ್ನೆಗೆ ಉತ್ತರಿಸಿದ ರಮೇಶ್​, “ಯಾವುದೇ ವಿಳಂಬವಿಲ್ಲ, ರಾಯ್ ಬರೇಲಿಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿಲ್ಲ. ಸ್ಮೃತಿ ಇರಾನಿ ಹಾಲಿ ಸಂಸದರು. ಯಾರಿಗೂ ಭಯವಿಲ್ಲ. ಚರ್ಚೆಗಳು ನಡೆಯುತ್ತಿವೆ, ಕಾಂಗ್ರೆಸ್ ಅಧ್ಯಕ್ಷರಿಗೆ ಅಧಿಕಾರ ನೀಡಲಾಗಿದೆ. ಮೇ 3ರವರೆಗೆ ಕಾಲಾವಕಾಶವಿದೆ ಎಂದು ರಮೇಶ್ ಹೇಳಿದರು.
ರಾಯ್​ ಬರೇಲಿಯಿಂದ ಪ್ರಿಯಾಂಕ ಗಾಂಧಿ ವಾದ್ರಾ, ಅಮೇಠಿಯಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸುವಂತೆ ಉತ್ತರ ಪ್ರದೇಶದ ಕಾಂಗ್ರೆಸ್ ನೇತೃತ್ವವು ಸಿಇಸಿಗೆ ತಿಳಿಸಿತ್ತು. 2004 ರಿಂದ ಅಮೇಠಿಯಿಂದ ಸತತ ಮೂರು ಬಾರಿ ಗೆದ್ದು ಬಂದಿದ್ದ ರಾಹುಲ್ ಗಾಂಧಿ ಅವರಿಗೆ 2019 ರಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. 2019ರಲ್ಲಿ ಕೇರಳದ ವಯನಾಡ್​ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿಯೂ ವಯನಾಡ್​ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕಿಳಿಯಲಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಗೆ ಮೇ 20 ರಂದು ಮತದಾನ ನಡೆಯಲಿದೆ.
ಮಂಗಳವಾರ ರಾತ್ರಿ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ:ಹಿಮಾಚಲ ಪ್ರದೇಶದ 2, ಹರ್ಯಾಣ ಮತ್ತು ಮಹಾರಾಷ್ಟ್ರದ ತಲಾ 1 ಲೋಕಸಭಾ ಕ್ಷೇತ್ರ ಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಿದೆ. ಹರ್ಯಾಣದ ಗುರುಗ್ರಾಮದಿಂದ ಬಾಲಿವುಡ್ ನಟ ರಾಜ್ ಬಬ್ಬರ್, ಹಿಮಾಚಲ ಪ್ರದೇಶದ ಕಂಗ್ರಾದಿಂದ ಆನಂದ್ ಶರ್ಮಾಗೆ ಪಕ್ಷ ಟಿಕೆಟ್ ನೀಡಿದೆ. ಮಹಾರಾಷ್ಟ್ರದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಭೂಷಣ್ ಪಾಟೀಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಎಫ್​​ಐಆರ್ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − two =
Remember me
