ನವದೆಹಲಿ:ಪಬ್​ಜಿ ಪ್ರಿಯಕರನನ್ನು ಮದುವೆಯಾಗಲು ಭಾರತಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿರುವ ಸೀಮಾ ಹೈದರ್​ಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಟ್ಟಿರುವ ಆರೋಪದ ಮೇಲೆ ನೋಯ್ಡಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪುಷ್ಪೇಂದ್ರ ಮತ್ತು ಪವನ್​ ಎಂದು ಗುರುತಿಸಲಾಗಿದೆ. ಇಬ್ಬರು ಕೂಡ ಉತ್ತರ ಪ್ರದೇಶದ ಬುಲಂದ್​ಶಹರ್​ ಮೂಲದವರು. ಬಂಧನದ ವೇಳೆ 15 ನಕಲಿ ಆಧಾರ್​ ಕಾರ್ಡ್ಸ್​ ಸಹ ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ದಿನಗಳಿಂದ ಇಬ್ಬರನ್ನು ನಿರಂತರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಅವರು ದೊಡ್ಡ ಮಟ್ಟದ ನಕಲಿ ದಾಖಲಾತಿ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ:“ನಿಮ್ಮ ಮಗಳನ್ನು ಹತ್ಯೆ ಮಾಡಿದ್ದೀನಿ” ಎಂದು ಅತ್ತೆಗೆ ಕರೆ ಮಾಡಿ ತಿಳಿಸಿದ ಪತಿರಾಯ!
ಪುಷ್ಟೇಂದ್ರ ಮತ್ತು ಪವನ್​, ಉತ್ತರ ಪ್ರದೇಶದ ಬುಲಂದ್​ಶಹರ್​ ಜಿಲ್ಲೆಯ ಅಹಮದಗಢದಲ್ಲಿ ಜನಾ ಸೇವಾ ಕೇಂದ್ರ ನಡೆಸುತ್ತಿದ್ದರು. ಕಾನೂನುಬಾಹಿರ ಚಟುವಟಿಕೆಗಳನ್ನೇ ಮುಖ್ಯವಾಗಿಸಿಕೊಂಡು ದಂಧೆಯಲ್ಲಿ ತೊಡಗಿದ್ದರು. ಇದನ್ನು ಅರಿತ ಸಚಿನ್ ಮೀನಾ ಮತ್ತು ಸೀಮಾ ಹೈದರ್ ತಮ್ಮ ಮದುವೆಗೆ ಬೇಕಾದ ಅಗತ್ಯ ದಾಖಲೆಗಳನ್ನು ಪಡೆಯಲು ಇಬ್ಬರ ನೆರವು ಕೋರಿದರು. ಪೊಲೀಸರ ತನಿಖೆಯ ಸಮಯದಲ್ಲಿ, ಆರೋಪಿಗಳಿಬ್ಬರು ನಕಲಿ ಆಧಾರ್ ಕಾರ್ಡ್‌ಗಳನ್ನು ರಚಿಸುತ್ತಿದ್ದರು ಎನ್ನುವುದಕ್ಕೆ ಪುರಾವೆಗಳು ಸಿಕ್ಕಿವೆ. ಅಲ್ಲದೆ, ಇದಕ್ಕೆ ಬಳಸುತ್ತಿದ್ದ ಸಾಧನವನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
30 ವರ್ಷದ ಸೀಮಾ ಮತ್ತು 22 ವರ್ಷದ ಸಚಿನ್​ ಮೀನಾ 2019ರಲ್ಲಿ ಕರೊನಾ ಸಂದರ್ಭದಲ್ಲಿ ಆನ್​ಲೈನ್​ ಗೇಮ್​ ಪಬ್​ಜಿ ಮುಖಾಂತರ ಪರಿಚಯವಾಗಿದ್ದಾಗಿ ಮತ್ತು ಈ ವರ್ಷದಲ್ಲಿ ಮದುವೆ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ ಆರೋಪದ ಮೇಲೆ ಸೀಮಾಳನ್ನು ಮತ್ತು ಆಕೆಗೆ ಆಶ್ರಯ ಕೊಟ್ಟ ಆರೋಪದ ಮೇಲೆ ಸಚಿನ್​ ಮತ್ತು ಆತನ ತಂದೆಯನ್ನು ಜುಲೈ 4ರಂದು ಬಂಧಿಸಲಾಗಿತ್ತು. ಮೂವರಿಗೂ ಜಾಮೀನು ದೊರೆತ ಹಿನ್ನೆಲೆ ಜುಲೈ 7ರಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪಾಕಿಸ್ತಾನಕ್ಕೆ ಮರಳಲು ಸೀಮಾ ಹಿಂದೇಟು ಹಾಕುತ್ತಿದ್ದಾರೆ. ಸಚಿನ್​ ಜತೆಯೇ ಮುಂದಿನ ಜೀವನ ಕಳೆಯುವುದಾಗಿ ಹೇಳುತ್ತಿದ್ದಾಳೆ. ಆದರೆ, ಇದಕ್ಕೆ ಕೆಲವು ಹಿಂದು ಸಂಘಟನೆಗಳು ವಿರುದ್ಧವಾಗಿವೆ. ಆಕೆ ಪಾಕ್​ನ ಏಜೆಂಟ್​ ಎಂದು ಆರೋಪಿಸಿದ್ದಾರೆ. ಆಕೆ ಇಲ್ಲಿಯೇ ಇದ್ದರೆ ದೇಶದ ರಕ್ಷಣೆಗೆ ಅಪಾಯವಿದೆ. ಕೂಡಲೇ ಆಕೆಯನ್ನು ಪಾಕ್​ಗೆ ಕಳುಹಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಅತ್ತ ಪಾಕ್​ನಲ್ಲೂ ಸೀಮಾ ವಾಪಸಾತಿಗೆ ಆಗ್ರಹಗಳು ಕೇಳಿಬರುತ್ತಿವೆ. ಒಂದು ವೇಳೆ ಬರದಿದ್ದರೆ ಭಾರತದಲ್ಲಿ ದಾಳಿಗಳು ನಡೆಯಲಿವೆ ಎಂಬ ಬೆದರಿಕೆ ಸಹ ಹಾಕುತ್ತಿದ್ದಾರೆ.
ಇದನ್ನೂ ಓದಿ:ಮತ್ತೊಮ್ಮೆ ಬಡ ವ್ಯಕ್ತಿಗೆ ಉಚಿತ ಆಪರೇಷನ್​ ಮಾಡುವ ಮೂಲಕ ಜನ ಮನ ಗೆದ್ದ ಕುಣಿಗಲ್​ ಶಾಸಕ
ಇಷ್ಟೆಲ್ಲ ಬೆಳವಣಿಗೆ ನಡುವೆ ಸೀಮಾ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂದೆ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.(ಏಜೆನ್ಸೀಸ್​)
ಸೀಮಾ-ಸಚಿನ್​ ಮದ್ವೆ ಫೋಟೋಗಳು ವೈರಲ್​: ಭಾರತದ ಪೌರತ್ವ ಕೋರಿ ರಾಷ್ಟ್ರಪತಿಗೆ ಅರ್ಜಿ

ಸೀಮಾ-ಸಚಿನ್​ ಮದ್ವೆ ಫೋಟೋಗಳು ವೈರಲ್​: ಭಾರತದ ಪೌರತ್ವ ಕೋರಿ ರಾಷ್ಟ್ರಪತಿಗೆ ಅರ್ಜಿ

’72 ಗಂಟೆಯೊಳಗೆ ಭಾರತ ತೊರೆಯಬೇಕು, ಇಲ್ಲದಿದ್ದರೆ…’ ಪಾಕ್‌ನ ಸೀಮಾ ಹೈದರ್​​​ಗೆ ಹಿಂದೂ ಸಂಘಟನೆಯಿಂದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
