ನೋಯ್ಡಾ:ಉತ್ತರಪ್ರದೇಶದ ನೋಯ್ಡಾದಲ್ಲಿ ರೇವ್​ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇಲೆ ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಎಲ್ವಿಶ್​ ಯಾದವ್ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.
ರೇವ್​ ಪಾರ್ಟಿ ಆಯೋಜನೆ ಹಾಗೂ ಹಾವಿನ ವಿಷ ಬಳಕೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರನ್ನು ಸೂರಜ್​ಪುರ ಮ್ಯಾಜಿಸ್ಟ್ರೇಟ್​ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
#WATCH| Noida: FIR against six, including Elvish Yadav, in snake venom case in UP | Arrested accused before the Surajpur Court. The court sent the five accused to 14 days of judicial custody.pic.twitter.com/dg8Proa0fu
ಇದನ್ನೂ ಓದಿ:ಸರ್ವಾಂಗೀಣ ಪ್ರದರ್ಶನ; ನೆದರ್ಲೆಂಡ್​ ವಿರುದ್ಧ ಅಫ್ಘಾನಿಸ್ತಾನಕ್ಕೆ 7 ವಿಕೆಟ್​ಗಳ ಜಯ
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಎಲ್ವಿಶ್​ ಯಾದವ್​ನನ್ನು ಪೊಲೀಸರು ಈವರೆಗೆ ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈತ ಉತ್ತರಪ್ರದೇಶ ಹಾಗೂ ಹರಿಯಾಣದ ಪ್ರಭಾವಿ ನಾಯಕರ ಜತೆ ಒಡನಾಟ ಹೊಂದಿದ್ದು, ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್​ ಅವರ ಜತೆಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎಲ್ವಿಶ್​ ವಿರುದ್ಧ ಸಾಕಷ್ಟು ಕ್ರಿಮಿನಲ್​ ಮೊಕದ್ದಮೆಗಳು ದಾಖಲಾಗಿದ್ದು, ಪ್ರಭಾವಿಗಳು ಈತನ ಬೆನ್ನಿಗೆ ನಿಂತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
