ನೋಯ್ಡಾ:ಸಾಮಾಜಿಕ ಮಾಧ್ಯಮದ ಯುಗದಲ್ಲಿ ಯುವ ಪೀಳಿಗೆ ಹೆಚ್ಚು ಸ್ಮಾರ್ಟ್​ಫೋನ್​ ಗೀಳಿಗೆ ಬಲಿಯಾಗುತ್ತಿದ್ದು, ದಿಢೀರ್‌ ಖ್ಯಾತರಾಗಬೇಕೆಂಬ ಹುಚ್ಚು ಹವ್ಯಾಸಕ್ಕೆ ಅಂಟಿಕೊಂಡ ಯುವ ಜನತೆ ರೀಲ್ಸ್​ ವ್ಯಾಮೋಹಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದೀಗ ಇದಕ್ಕೆ ಪೂರಕವೆಂಬಂತೆ ನಾಲ್ವರು ಅಪ್ರಾಪ್ತ ವಯಸ್ಕರು ರೀಲ್ಸ್​ ವಿಚಾರವಾಗಿ ನಡು ರಸ್ತೆಯಲ್ಲೇ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಉತ್ತರಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಇನ್​​ಸ್ಟಾಗ್ರಾಮ್​ನಲ್ಲಿ ಮಾಡಿ ಹಾಕಲಾಗಿದ್ದ ಕಮೆಂಟ್​ ವಿಚಾರವಾಗಿ ಈ ನಾಲ್ವರು ನಡು ರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ರಸ್ತೆಯಲ್ಲಿ ಜನರು ಯಾರು ಸಹ ಇವರ ಜಗಳವನ್ನು ಬಿಡಿಸಲು ಮುಂದಾಗದಿರುವುದು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
@noidatraffic@noida_authority@PoliceNoida@UppoliceDespite the presence of police, nobody attempted to break up the fight between these girls in the middle of the road. What are the authorities now doing?pic.twitter.com/b7rDtOx7Gs
ಇದನ್ನೂ ಓದಿ:ಸಂಪೂರ್ಣ ಆಘಾತಕಾರಿ; ಕೆಕೆಆರ್​ ಆಟಗಾರನ ನಡೆಗೆ ಸುನೀಲ್​ ಗಾವಸ್ಕರ್ ಕೆಂಡ
ಈ ಕುರಿತು ಪ್ರತಿಕ್ರಿಯಿಸಿರುವ ನೋಯ್ಡಾ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು, ಜಗಳವಾಡಿರುವ ನಾಲ್ವರು 18 ವರ್ಷಕ್ಕಿಂತ ಕೆಳಗಿನವರು ಎಂದು ತಿಳಿದು ಬಂದಿದ್ದು, ಇನ್​​ಸ್ಟಾಗ್ರಾಮ್​ನಲ್ಲಿನ ರೀಲ್ಸ್​ ಒಂದರ​ ವಿಚಾರವಾಗಿ ಈ ನಾಲ್ವರು ಕಿತ್ತಾಡಿಕೊಂಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಕೂಡಲೇ ನಾಲ್ವರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ.
ವಿಚಾರಿಸಿದಾಗ ಇನ್​​ಸ್ಟಾಗ್ರಾಮ್​ನಲ್ಲಿನ ರೀಲ್ಸ್​ ಒಂದರ ವಿಚಾರಕ್ಕೆ ಜಗಳವಾಡಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಲಾಗಿದ್ದು, ಬುದ್ದಿವಾದ ಹೇಳಿ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ನೋಯ್ಡಾ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 16 =
Remember me
