ನವದೆಹಲಿ: ರಾಷ್ಟ್ರ ರಾಜಧಾನಿಯ ಈಶಾನ್ಯ ದೆಹಲಿಯ ಭಾಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ, ಸೋಮವಾರ ನಾಲ್ವರು ಮೃತಪಟ್ಟಿದ್ದರು.
ಪರಿಸ್ಥಿತಿ ಕೈ ಮೀರಿದ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮಂಗಳವಾರ ಸ್ಥಿತಿಗತಿ ಪರಿಶೀಲನೆಗಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್​ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡನ್ನು ಸಭೆಗೆ ಆಹ್ವಾನಿಸಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಸೋಮವಾರ ರಾತ್ರಿ ಹಿಂಸಾಚಾರ ನಡೆದ ಕಾರಣ ಗೃಹ ಸಚಿವಾಲಯವೇ ಮುತುವರ್ಜಿ ವಹಿಸಿ ಎಲ್ಲರನ್ನೂ ಮಾತುಕತೆಗೆ ಆಹ್ವಾನಿಸಿದೆ. ರಾತ್ರಿ ನಡೆದ ಹಿಂಸಾಚಾರದಲ್ಲಿ ಒಬ್ಬ ಪೊಲೀಸ್ ಪೇದೆ ಸೇರಿ ನಾಲ್ವರು ಮೃತಪಟ್ಟಿದ್ದು, ಕನಿಷ್ಠ 50 ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ದೆಹಲಿ ಪೊಲೀಸ್ ಸಿಬ್ಬಂದಿ, ಅರೆ ಸೇನಾ ಪಡೆ ಸಿಬ್ಬಂದಿಯೂ ಇದ್ದಾರೆ. ಪ್ರತಿಭಟನಾಕಾರರು ಮನೆ, ಅಂಗಡಿ, ವಾಹನಗಳು, ಪೆಟ್ರೋಲ್ ಪಂಪ್​ಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದರು. (ಏಜೆನ್ಸೀಸ್)
ಈಶಾನ್ಯ ದೆಹಲಿಯಲ್ಲಿ ತೀವ್ರ ಹಿಂಸಾಚಾರ; ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
