ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆಯ ಪರ-ವಿರೋಧ ಬಣದಿಂದ ಈಶಾನ್ಯ ದೆಹಲಿಯಲ್ಲಿ ಉಂಟಾದ ಗಲಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಈವರೆಗೂ 23 ಮಂದಿಯನ್ನು ಬಲಿ ಪಡೆದುಕೊಂಡಿದೆ.
ಪರಿಸ್ಥಿತಿ ಇನ್ನು ತಿಳಿಗೊಳ್ಳದೆ ಇರುವುದರಿಂದ ಶಾಂತಿ ಕಾಪಾಡಲು ಅನೇಕರು ಮನವಿ ಮಾಡುತ್ತಿದ್ದಾರೆ. ಹಿಂಸಾಚಾರವನ್ನು ಖಂಡಿಸಿ ರಾಷ್ಟ್ರಾದ್ಯಂತ ಅನೇಕರು ದನಿ ಎತ್ತಿದ್ದಾರೆ. ಇದೀಗ ಸ್ಯಾಂಡಲ್​ವುಡ್ ನಟ ಡಾಲಿ ಧನಂಜಯ್​ ಮಾರ್ಮಿಕವಾಗಿ ಮಾಡಿರುವ ಟ್ವೀಟ್​ ಕೂಡ ಈಶಾನ್ಯ ದೆಹಲಿಯ ಹಿಂಸಾಚಾರದತ್ತ ಬೊಟ್ಟು ಮಾಡಿ ತೋರಿಸುತ್ತಿದೆ.
ಸೂರ್ಯಕಾಂತಿಯ ನೋಡಿ ಕಲಿಯಿರಿ ಎಂದೆ. ಆದರೆ ಧರ್ಮದತ್ತ ವಾಲಿದರು. ಹೊಳೆಯ ನಿಶ್ಯಬ್ಧತೆಯೆಡೆಗೆ ನಡೆಯಿರಿ ಎಂದೆ. ಆದರೆ, ಗುಂಡಿನ ಶಬ್ಧಕ್ಕೆ ಮಾರುಹೋದರು. ಸೂರ್ಯ ಮುಳುಗುತ್ತಿದ್ದಾನೆ. ಹೊಳೆಯೂ ಹೆಪ್ಪುಗಟ್ಟುತ್ತಿದೆ ಎಂದು ಧನಂಜಯ್​ ಟ್ವೀಟ್​ ಮಾಡಿರುವುದು ಸಾಕಷ್ಟು ಕುತೂಹಲಕ್ಕೀಡು ಮಾಡಿದೆ.
ಇತ್ತೀಚೆಗಷ್ಟೇ ನಟ ಧನಂಜಯ್​ ಅವರ ಪಾಪ್​ಕಾರ್ನ್​ ಮಂಕಿ ಟೈಗರ್​ ಚಿತ್ರ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವನ್ನು ದುನಿಯಾ ಖ್ಯಾತಿ ಸೂರಿ ನಿರ್ದೇಶನ ಮಾಡಿದ್ದಾರೆ.(ಏಜೆನ್ಸೀಸ್​)
ಸೂರ್ಯಕಾಂತಿಯ ನೋಡಿ ಕಲಿಯಿರಿ ಎಂದೆಧರ್ಮದತ್ತ ವಾಲಿದರು!ಹೊಳೆಯ ನಿಶ್ಯಬ್ಧತೆಯೆಡೆಗೆ ನಡೆಯಿರಿ ಎಂದೆಗುಂಡಿನ ಶಬ್ಧಕ್ಕೆ ಮಾರುಹೋದರು!ಸೂರ್ಯ ಮುಳುಗುತ್ತಿದ್ದಾನೆ!ಹೊಳೆ ಹೆಪ್ಪುಗಟ್ಟುತ್ತಿದೆ!
— Dhananjaya (@Dhananjayaka)February 26, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 10 =
Remember me
