ನವದೆಹಲಿ:“ಜಗತ್ತಿನ ಅತ್ಯಂತ ಪುರಾತನವಾದ ಜ್ಞಾನ ಪರಂಪರೆಯನ್ನು ಹೊಂದಿರುವ ವಿಶಾಲವಾದ ಭಾರತದಲ್ಲಿ ಒಂದೇ ಒಂದು ಶಿಕ್ಷಣ ಸಂಸ್ಥೆ ವಿಶ್ವದ ಅಗ್ರ 50 ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ನಾವು ಇದರ ಬಗ್ಗೆ ಯೋಚಿಸಬೇಕಾಗಿದೆ ಎಂದು ದ್ರೌಪದಿ ಮುರ್ಮು ಹೇಳಿದರು.
ಇದನ್ನೂ ಓದಿ:“ನನ್ನ ಜಾತಿ ಮೇಲೂ ಹಲ್ಲೆ ನಡೆದಿದೆ,ಆದರೆ..”: ಜಗದೀಪ್ ಧನ್ಖರ್ ‘ಅವಮಾನ’ಕ್ಕೆ ಖರ್ಗೆ ಪ್ರತಿಕ್ರಿಯೆ
ಖರಗ್‌ಪುರ ಐಐಟಿಯ 69ನೇ ಘಟಿಕೋತ್ಸವ ಭಾಷಣದಲ್ಲಿ ದ್ರೌಪದಿ ಮುರ್ಮು ಅವರು ಶ್ರೇಯಾಂಕಕ್ಕಿಂತ ಗುಣಮಟ್ಟದ ಶಿಕ್ಷಣದ ಅಗತ್ಯವನ್ನು ಒತ್ತಿ ಹೇಳಿದರು. ಗುಣಮಟ್ಟದ ಶ್ರೇಯಾಂಕವು ವಿಶ್ವಾದ್ಯಂತ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಆಕರ್ಷಿಸುವುದಲ್ಲದೆ ದೇಶದ ಖ್ಯಾತಿಯನ್ನು ಹೆಚ್ಚಿಸುತ್ತದೆ ಎಂದು ಒಪ್ಪಿಕೊಂಡರು.
ಖರಗ್‌ಪುರ ಐಐಟಿಯು ದೇಶದ ಅತ್ಯಂತ ಹಳೆಯ ಐಐಟಿಗಳಲ್ಲಿ ಒಂದಾಗಿದೆ. ಇದು ಈ ದಿಸೆಯಲ್ಲಿ ಪ್ರಯತ್ನ ಮಾಡುವಂತೆ ಕರೆ ನೀಡಿದರು.ವಿಶ್ವದಲ್ಲಿ ಅತ್ಯಂತ ಹಳೆಯ ಜ್ಞಾನ ಸಂಪ್ರದಾಯವನ್ನು ಹೊಂದಿರುವ ರಾಷ್ಟ್ರ ನಮ್ಮದು. ಖರಗ್‌ಪುರ ಐಐಟಿ ಯಂತಹ ಸಂಸ್ಥೆಗಳು ಆಧುನಿಕ ಮತ್ತು ತಂತ್ರಜ್ಞಾನದ ಮೂಲಕ ಪ್ರಮುಖ ಪಾತ್ರವನ್ನು ವಹಿಸಬೇಕಾಗುತ್ತದೆ. ತಂತ್ರಜ್ಞಾನ ಅಭಿವೃದ್ಧಿಗೆ ಕ್ರಾಂತಿಕಾರಿ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.
ಖರಗ್‌ಪುರ ಐಐಟಿ ಇತರ ಜಾಗತಿಕ ಸಂಸ್ಥೆಗಳ ಸಹಯೋಗದಲ್ಲಿ ಕೆಲಸ ಮಾಡುತ್ತಿದೆ. ಈ ಹಂತವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸಹಾಯ ಮಾಡುತ್ತದೆ. ಇಂತಹ ಪ್ರಯತ್ನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಜಾಗತಿಕ ಮನ್ನಣೆ ನೀಡುವಲ್ಲಿ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ಪ್ರತಿಯೊಬ್ಬರೂ ತಂತ್ರಜ್ಞಾನದ ಅರಿವು ಹೊಂದಿರಬೇಕು. ತಂತ್ರಜ್ಞಾನದ ಬಳಕೆಯು ಸಮಾಜದಲ್ಲಿ ಅಸಮಾನತೆ ಹೆಚ್ಚಿಸುವ ಬದಲು ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸುವಂತಾಗಬೇಕು. ಡಿಜಿಟಲ್ ಪಾವತಿ ವ್ಯವಸ್ಥೆಯ ಉದಾಹರಣೆ ಉಲ್ಲೇಖಿಸಿದ ಅವರು, ತಂತ್ರಜ್ಞಾನವು ಜೀವನವನ್ನು ಹೇಗೆ ಸರಳಗೊಳಿಸಿದೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ ಎಂದರು.
“ಐಐಟಿಗಳನ್ನು ಪ್ರತಿಭೆ ಮತ್ತು ತಂತ್ರಜ್ಞಾನದ ಕಾವು ಕೇಂದ್ರಗಳೆಂದು ಪರಿಗಣಿಸಲಾಗುತ್ತದೆ. ಖರಗ್‌ಪುರ ಐಐಟಿ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸಂಸ್ಥೆ ಸುಮಾರು 73 ವರ್ಷದ ತನ್ನ ಪಯಣದಲ್ಲಿ ಮಹಾನ್ ಪ್ರತಿಭೆಗಳನ್ನು ಪೋಷಿಸಿದೆ ಮತ್ತು ದೇಶದ ಅಭಿವೃದ್ಧಿಗೆ ಸಾಟಿಯಿಲ್ಲದ ಕೊಡುಗೆ ನೀಡಿದೆ ಎಂದು ರಾಷ್ಟ್ರಪತಿಯವರು ಹೇಳಿದಳು.
ಸಂಪತ್ತು ಗಳಿಕೆಯಲ್ಲಿ ಅಂಬಾನಿ, ಅದಾನಿಯನ್ನೇ ಹಿಂದಿಕ್ಕಿದ್ದಾರೆ ಭಾರತದ ಈ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 10 =
Remember me
