ನವದೆಹಲಿ:ದೆಹಲಿ ಸರ್ಕಾರ ಆಯೋಜಿಸುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವೆ ಅತಿಶಿ ಬದಲು, ಗೃಹ ಸಚಿವ ಕೈಲಾಶ್ ಗೆಹಲೋತ್ ಅವರ ಹೆಸರನ್ನು ಲೆಫ್ಟಿನೆಂಟ್‌ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅಂತಿಮಗೊಳಿಸಿದ್ದಾರೆ.
ಇದನ್ನೂ ಓದಿ:ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಸೆಪ್ಟೆಂಬರ್ 2ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದು ತನ್ನ ಅನುಪಸ್ಥಿತಿಯಲ್ಲಿ ಶಿಕ್ಷಣ ಸಚಿವೆ ಅತಿಶಿ ದೆಹಲಿ ಸರ್ಕಾರದ ಪರವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಲೆ.ಗ. ಸಕ್ಸೇನಾ ಅವರು ಕೇಜ್ರಿವಾಲ್ ಅವರ ನಿರ್ದೇಶನ ತಿರಸ್ಕರಿಸಿದ್ದರು.
ಈ ವಿಚಾರದಲ್ಲಿ ಲೆ.ಗವರ್ನರ್​ ಸಕ್ಸೇನಾ ಅವರ ಕಚೇರಿ ಮಂಗಳವಾರ ಸಂಜೆ ಪ್ರಕಟಣೆ ಹೊರಡಿಸಿದ್ದು ಗೃಹ ಸಚಿವ ಗೆಹ್ಲೋಟ್​ ಅವರನ್ನು ಧ್ವಜಾರೋಹಣ ನೆರವೇರಿಸಲು ನೇಮಕ ಮಾಡಲಾಗಿದ್ದು, ಧ್ವಜಾಎರೋಹಣದ ನಂತರ ದೆಹಲಿ ಪೊಲೀಸರು ಜಾಥಾ ನಡೆಸಲಿದ್ದಾರೆ. ಈ ಕುರಿತು ಗೃಹ ಸಚಿವ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದೆ. ಇದರಿಂದ ಲೆಫ್ಟಿನೆಂಟ್​ ಗವರ್ನರ್​ ನಡುವೆ ಮತ್ತೊಂದು ಸುತ್ತಿನ ಜಟಾಟಿಗೆ ವೇದಿಕೆ ಸಿದ್ಧವಾದಂತಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಲು ಲೆ.ಗವರ್ನರ್​ ಸಕ್ಸೇನಾ ಅವರು ಗೃಹ ಸಚಿವ ಕೈಲಾಶ್ ಅವರನ್ನು ನೇಮಕ ಮಾಡಿರುವುದಾಗಿ ವರದಿ ವಿವರಿಸಿದೆ. ಈ ಹಿನ್ನೆಲೆಯನ್ನು ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ ಎಂದು ಸಕ್ಸೆನಾ ಅವರ ಕಾರ್ಯದರ್ಶಿ ಅಶಿಶ್ ಕುಂದ್ರ ತಿಳಿಸಿದ್ದಾರೆ.
ಕಾಸಿಗಾಗಿ ಪೋಸ್ಟಿಂಗ್‌ನಿಂದಲೇ ತುಂಗಭದ್ರಾ ಡ್ಯಾಂ ಗೇಟ್‌ ಕಟ್: ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 3 =
Remember me
