ಢಾಕಾ:ಉದ್ಯೋಗ ಮೀಸಲಾತಿ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ 650ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದ ನೆರೆಯ ಬಾಂಗ್ಲಾದೇಶದಲ್ಲಿ ಇದೀಗ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆದರೆ, ಬಾಂಗ್ಲಾದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಭಾರತವೇ ಮುಖ್ಯ ಕಾರಣ ಎಂದು ಆರೋಪಿಸಿರುವ ನೆರೆಯ ದೇಶ ಹೊಸ ಕ್ಯಾತೆ ತೆಗೆದಿದೆ.
ಭಾರತವು ಬಾಂಗ್ಲಾದೇಶ ವಿರೋಧಿ ನೀತಿ ಅನುಸರಿಸಿ ಡ್ಯಾಂನಿಂದ ದಿಢೀರನೆ ನೀರು ಬಿಟ್ಟಿದ್ದರಿಂದ ನಮ್ಮ ದೇಶ ಪ್ರವಾಹದಲ್ಲಿ ಮುಳುಗುತ್ತಿದೆ. ಪುರಾ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಬಾಂಗ್ಲಾದೇಶದಲ್ಲಿ ಪ್ರವಾಹ ಉಂಟಾಗಿದೆ ಎಂದು ಆರೋಪಿಸಿತ್ತು. ಇದಕ್ಕೆ ತಿರುಗೇಟು ನೀಡಿರುವ ಭಾರತ ನಿಮ್ಮ ದೇಶದಲ್ಲಿ ಹೆಚ್ಚಿನ ಮಳೆಯಾದ ಕಾರಣ ಪ್ರವಾಹವಾಗಿದೆಯೇ ಹೊರತು ನಮ್ಮಿಂದಲ್ಲ. ಈ ರೀತಿಯ ತಪ್ಪು ಮಾಹಿತಿಯನ್ನು ಹರಡಬೇಡಿ ಎಂದು ತಿರುಗೇಟು ನೀಡಿದೆ.
ಈ ಕುರಿತು ಮಾತನಾಡಿರುವ ಭಾರತೀಯ ಹೈ ಕಮಿಷನರ್ ಪ್ರಣಯ್ ವರ್ಮಾ ಬಾಂಗ್ಲಾ ಸರ್ಕಾರದ ಹಂಗಾಮಿ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಹಕಾರವನ್ನು ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ:ಭೀಮ ಸಿನಿಮಾ ಇಂಪ್ಯಾಕ್ಟ್​; ಡ್ರಗ್ಸ್​ ದಂಧೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್​ ಆಯುಕ್ತರಿಗೆ ಪತ್ರ
ಬಳಿಕ ಮಾತನಾಡಿದ ವರ್ಮಾ, ಬಾಂಗ್ಲಾದೇಶದ ಜಿಲ್ಲೆಗಳಲ್ಲಿ ಪ್ರವಾಹವು ಭಾರೀ ಮಳೆಯಿಂದ ಉಂಟಾಗಿದೆಯೇ ಹೊರತು ತ್ರಿಪುರಾದ ಗುಮ್ಟಿ ನದಿಯ ಮೇಲಿನ ಡಂಬೂರ್ ಅಣೆಕಟ್ಟಿನಿಂದ ಬಿಡುಗಡೆಯಾದ ನೀರಿನಿಂದಲ್ಲ. ತಪ್ಪಾದ ಮಾಹಿತಿಯನ್ನು ಹರಡಿಬೇಡಿ. ತ್ರಿಪುರಾದ ಗುಮ್ಟಿ ನದಿಯ ಮೇಲ್ಭಾಗದ ದುಂಬೂರು ಅಣೆಕಟ್ಟನ್ನು ತೆರೆಯುವ ಮೂಲಕ ಬಾಂಗ್ಲಾದೇಶದ ಪೂರ್ವ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಪ್ರಸ್ತುತ ಪ್ರವಾಹದ ಪರಿಸ್ಥಿತಿ ಉಂಟಾಗಿದೆ ಎಂದು ಬಾಂಗ್ಲಾದೇಶದಲ್ಲಿ ಕಳವಳ ವ್ಯಕ್ತಪಡಿಸುವುದನ್ನು ನಾವು ನೋಡಿದ್ದೇವೆ. ಇದು ವಾಸ್ತವಿಕವಾಗಿ ಸರಿಯಲ್ಲ ಎಂದು ಎಚ್ಚರಿಸಿದ್ದಾರೆ.
ಬಾಂಗ್ಲಾದೇಶದ ಆರು ಜಿಲ್ಲೆಗಳಲ್ಲಿ ಸುಮಾರು 18 ಲಕ್ಷ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಎಂಟು ಜಿಲ್ಲೆಗಳಲ್ಲಿ 3 ಮಿಲಿಯನ್ ಜನರು ಸಿಲುಕಿಕೊಂಡಿದ್ದಾರೆ. ತ್ರಿಪುರಾ ಮತ್ತು ಬಾಂಗ್ಲಾದೇಶದ ಪಕ್ಕದ ಜಿಲ್ಲೆಗಳಲ್ಲಿ ಆಗಸ್ಟ್ 21ರಿಂದ ಭಾರೀ ಮಳೆಯು ಮುಂದುವರಿದಿದೆ. ಮಳೆಗೆ ಸಂಬಂಧಿಸಿದಂತೆ ಉಂಟಾದ ಅವಘಡಗಳಲ್ಲಿ 13ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 3 =
Remember me
