ನವದೆಹಲಿ:ನವದಂಪತಿ ಇಬ್ಬರೂ ಒಟ್ಟಿಗೆ ನದಿಗೆ ಹಾರಿದ್ದಾರೆ. ವಧು ಪ್ರಾಣ ಕಳೆದುಕೊಂಡಿದ್ದು, ವರ ಪ್ರಾಣ ಭಯದಲ್ಲಿ ಈಜಿಕೊಂಡು ದಡ ಸೇರಿದ್ದಾನೆ. ಈ  ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಪೆನುಗೊಂಡದಲ್ಲಿ ನಡೆದಿದೆ.
ವಧುವಿನ ಕುಟುಂಬಸ್ಥರು ಹಾಗೂ ಪೊಲೀಸರ ಪ್ರಕಾರ, ವಡಲಿಯ ಕೊರಡ ಸತ್ಯವಾಣಿ ಡಿಸೆಂಬರ್ 15ರಂದು ಉಂದ್ರಜಾವರಂ ಮಂಡಲದ ಮೋರ್ಟಾದ ವರ ಕೆ.ಶಿವರಾಮಕೃಷ್ಣ ಅವರನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ ಇಬ್ಬರೂ ಸಿನಿಮಾಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಹಾಗೆ ಹೋದವರು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.
ದಂಪತಿಯ ಬೈಕ್ ಸಿದ್ದಣ್ಣನ ಸೇತುವೆ ಬಳಿ ಪತ್ತೆಯಾಗಿದೆ. ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಭಾವಿಸಿದ್ದರು. ಆದರೆ ಅಷ್ಟರಲ್ಲಿ ಆಘಾತಕಾರಿ ವಿಷಯವೊಂದು ಹೊರಬಿದ್ದಿದೆ. ರಾಮಕೃಷ್ಣ ಬದುಕಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಪತ್ತೆಯಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ನಿಜವಾಗಿ ನಡೆದಿದ್ದನ್ನು ಬಹಿರಂಗಪಡಿಸಿದ್ದಾನೆ.
ಪತಿ-ಪತ್ನಿ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದರಿಂದ ಇಬ್ಬರೂ ಸೇರಿ ಗೋದಾವರಿ ನದಿಗೆ ಹಾರಿದ್ದಾರೆ ಎಂದು ರಾಮಕೃಷ್ಣ ತಿಳಿಸಿದ್ದಾರೆ. ಪ್ರಾಣಭಯದಿಂದ ಈಜಿದ್ದು, ಪತ್ನಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ವರದಕ್ಷಿಣೆಯಾಗಿ 1 ಲಕ್ಷದ 60 ಸಾವಿರ ಹಾಗೂ ಚಿನ್ನಾಭರಣ ಹಾಕಿದ್ದೇವೆ. ರಾಮಕೃಷ್ಣ ಏನೋ ನಾಟಕವಾಡುತ್ತಿದ್ದಾರೆ ಎಂದು ವಧುವಿನ ಸಂಬಂಧಿಕರು ಆರೋಪಿಸುತ್ತಿದ್ದಾರೆ. ನಾಪತ್ತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೆನುಗೊಂಡ ಪೊಲೀಸರು ತಿಳಿಸಿದ್ದಾರೆ.  ಈ ಪ್ರಕರಣದ ತನಿಖೆ ನಡೆಯುತ್ತಿದೆ.
Gold, Silver Price; ಶುಕ್ರವಾರದಂದು ಆಭರಣ ಖರೀದಿಸುವ ಯೋಚನೆ ಇದ್ದರೆ ಬೆಲೆ ಗಮನಿಸಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 17 =
Remember me
