ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಮಂಡಿಸಲಾದ ಮಧ್ಯಂತರ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಪಾವತಿದಾರರಿಗೆ ಶಾಕ್​ ನೀಡಿತ್ತು. ಇದೀಗ ಆದಾಯ ತೆರಿಗೆ ಕುರಿತಂತೆ ವ್ಯಕ್ತಿಯೊಬ್ಬರು ಮಾಡಿರುವ ಟ್ವೀಟ್​ ಹೊಸ ವಿವಾದಕ್ಕೆ ನಾಂದಿ ಹಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ನವದೆಹಲಿಯ ನಿವಾಸಿ ಅಪೂರ್ವ್​ ಜೈನ್​ ಎಂಬುವವರು ತಾವು 1 ರೂಪಾಯಿ ತೆರಿಗೆ ಬಾಕಿ ಪಾವತಿಸದಿರುವುದಕ್ಕೆ ಆದಾಯ ತೆರಿಗೆ ಇಲಾಖೆ ಅವರಿಗೆ ನೋಟಿಸ್​ ಜಾರಿ ಮಾಡಿದೆ. ಬಾಲಿ ಪಾವತಿ ಮಾಡಲು ತಾವು ಚಾರ್ಟರ್ಡ್ ಅಕೌಂಟೆಂಟ್​ಗೆ ₹. 50 ಸಾವಿರ ಕಟ್ಟಿದ್ದಾಗಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಟ್ವೀಟ್​ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದವನ್ನು ಹುಟ್ಟುಹಾಕಿದ್ದು, ಹಲವರು ಸರ್ಕಾರ ಹಾಗೂ ವ್ಯಕ್ತಿಯ ನಡೆಗೆ ಕಿಡಿಕಾರಿದ್ದಾರೆ.
Paid 50000/- fee to CA for a IT notice I received recently wherein the final disputed value turned out to be Re 1/-.I am not joking. 🙃
ಇದನ್ನೂ ಓದಿ:ಹಾಸ್ಟೆಲ್​ ಉಪಹಾರ ಸೇವಿಸಿ 35ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಈ ಘಟನೆಯು ಭಾರತದಲ್ಲಿ ತೆರಿಗೆ ವ್ಯವಸ್ಥೆಯನ್ನು ನ್ಯಾವಿಗೇಟ್ ಮಾಡುವ ಸಂಕೀರ್ಣತೆಗಳನ್ನು ಎತ್ತಿ ತೋರಿಸುತ್ತದೆ. ತೆರಿಗೆ ಪಾವತಿಯಲ್ಲಿ ಆಗುವ ಎಡವಟ್ಟುಗಳು ದೊಡ್ಡ ಮೊತ್ತದ ಶುಲ್ಕ ಕಟ್ಟುವಂತೆ ಮಾಡುತ್ತದೆ. ಕೆಲವರು ಇದು ಸರ್ಕಾರದ ಅಸಮರ್ಥತೆ ಎಂದು ಕಿಡಿಕಾರಿದರೆ. ಇನ್ನೂ ಕೆಲವರು ಚಾರ್ಟರ್ಡ್​ ಅಕೌಂಟೆಂಟ್​ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್​ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದು ತಮಾಷೆಯಂತೆ ಕಾಣುತ್ತಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ಐಟಿ ಇಲಾಖೆಯವರು ಮುಂದಿನ ದಿನಗಳಲ್ಲಿ ರೈತರಿಗೂ ನೋಟಿಸ್​ ಕಳುಹಿಸಿದರೆ ಅಚ್ಚರಿಪಡಬೇಕಿಲ್ಲ ಎಂದು ಕಮೆಂಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಅಪೂರ್ವ್​​ ಜೈನ್​ ಅವರ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:19 + 10 =
Remember me
