ಚೆನೈ:ವೈದ್ಯಕೀಯ ಕೋರ್ಸ್​ ಪ್ರವೇಶಕ್ಕಾಗಿ ನಡೆಸುವ ನೀಟ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ವಿದ್ಯಾರ್ಥಿಗಳ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ತಮಿಳುನಾಡು ಯುವ ಹಾಗೂ ಕ್ರೀಡಾ ಸಚಿವ ಉದಯ್​ನಿಧಿ ಸ್ಟಾಲಿನ್​​ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನೀಟ್​ ಪರೀಕ್ಷೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಡಿಎಂಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಉದಯ್​ನಿಧಿ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉದಯ್​ನಿಧಿ ಸ್ಟಾಲಿನ್​ ನೀಟ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ವಿದ್ಯಾರ್ಥಿಗಳ ಸಾವು ಆತ್ಮಹತ್ಯೆಯಲ್ಲ. ಅದು ಕೇಂದ್ರ ಸರ್ಕಾರ ಮಾಡಿರುವ ಕೊಲೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ರೈತರ ಹಿತದ ಜತೆಗೆ ನ್ಯಾಯಾಲಯದ ನಿರ್ಧಾರಕ್ಕೆ ಆದ್ಯತೆ ಕೊಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್​
ರಾಜ್ಯದಲ್ಲಿ ನೀಟ್​ ಬ್ಯಾನ್​ ಮಾಡುವ ವಿಚಾರವಾಗಿ ವಿಧಾನಸಭೆಯಲ್ಲಿ ಸರ್ಕಾರದ ವತಿಯಿಂದ ನಿರ್ಣಯವನ್ನು ಅಂಗೀಕರಿಸಲಾಗಿದ್ದು, ಅದಕ್ಕೆ ಅಂಕಿತ ಹಾಕದೇ ರಾಜ್ಯಪಾಲರು ತಮ್ಮ ದುರಹಂಕಾರವನ್ನು ಪ್ರದರ್ಶಿಸುತ್ತಿದ್ದಾರೆ. ಅವರು ಆರ್​.ಎನ್ ರವಿ ಅಲ್ಲ, ಆರ್​ಎಸ್​​ಎಸ್​ ರವಿ ಎಂದು ಟೀಕಿಸಿದ್ದಾರೆ.
ನೀವು ಈ ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬೇಕು. ಒಂದು ವೇಳೆ ನೀವು ಚುನಾವಣೆಯಲ್ಲಿ ಗೆದ್ದರೆ ನಾನು ನಿಮ್ಮ ಮಾತನ್ನು ಕೇಳುತ್ತೇನೆ. ನೀಟ್​ಗೆ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ರಾಜ್ಯಪಾಲ ಆರ್​.ಎನ್. ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ನಿಟ್ಟನಲ್ಲಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನೀಟ್​ ಪರೀಕ್ಷೆಯನ್ನು ರದ್ದು ಮಾಡುವ ಮೂಲಕ ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಚಿವ ಉದಯ್​ನಿಧಿ ಸ್ಟಾಲಿನ್​ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
