ದೆಹಲಿ:500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಇದನ್ನೂ ಓದಿ:ಶೌಚಾಲಯಕ್ಕೆ ಬೀಗ ಹಾಕಿದ್ದಕ್ಕೆ ಕೋಪ; ನಶೆಯಲ್ಲಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ
2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಹಿನ್ನೆಲೆಯಲ್ಲಿ ಆರ್‌ಬಿಐ ಗವರ್ನರ್ ಈ ವಿಷಯದ ಕುರಿತಾಗಿ ಸ್ಪಷ್ಟನೆ ನೀಡಿದ್ದು, ಆರ್‌ಬಿಐ 500 ರೂ. ನೋಟು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ನೋಟು ಮರು ಪರಿಚಯಿಸುವ ಬಗ್ಗೆ ಯೋಚಿಸುತ್ತಿಲ್ಲ. ಸಾರ್ವಜನಿಕರು ಈ ಕುರಿತು ಊಹಾಪೋಹ ಎಬ್ಬಿಸಬಾರದು ಎಂದು ಹೇಳಿದರು.
ಚಲಾವಣೆಯಲ್ಲಿದ್ದ 2000ರೂ. ನೋಟುಗಳ ಪೈಕಿ ಶೇ.50ರಷ್ಟು ನೋಟುಗಳು ವಾಪಸ್ ಬಂದಿವೆ. ಇವುಗಳ ಮೌಲ್ಯ 1.82 ಲಕ್ಷ ಕೋಟಿ ರೂ. ಆಗಿದೆ. ವಾಪಸಾದ 2000 ರೂ.ನೋಟುಗಳು ಕೆಲವರು ಬ್ಯಾಂಕ್ ಠೇವಣಿ ರೂಪದಲ್ಲಿ ಬ್ಯಾಂಕ್​ಗೆ ಹಿಂತಿರುಗಿಸಿದ್ದರೆ, ಉಳಿದವರು ವಿನಿಮಯ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಕೊನೆಯ ಕ್ಷಣದಲ್ಲಿ ಜನರು ನೋಟುಗಳ ಜಮಾ ಮಾಡಲು ಓಡಾಡಬಾರದು. ಈಗಲೇ ಸಾರ್ವಜನಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ 2,000 ರೂ. ನೋಟುಗಳನ್ನು ಠೇವಣಿ ಮಾಡಲು ಅಥವಾ ಬದಲಾಯಿಸಲು ಬ್ಯಾಂಕ್​ಗೆ ಹೋಗಬೇಕು. ಕೊನೆಯ 10-15 ದಿನಗಳಲ್ಲಿ ದಯವಿಟ್ಟು ಆತುರಪಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
