ನವದೆಹಲಿ:ನವಿ ಮುಂಬೈನಿಂದ ಮುಂಬೈಗೆ ಸಂಪರ್ಕಿಸುವ ಅಟಲ್​ ಸೇತು ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಇತ್ತ ಈ ಪೋಸ್ಟ್​ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ.
Absolutely! Nothing more satisfying than connecting people and improving lives.https://t.co/GZ3gbLN2bb
ಇದನ್ನೂ ಓದಿ:LSGvsMI; ಈ ಪಂದ್ಯದಲ್ಲಿ ಯಾರು ಗೆದ್ದರೆ ಆರ್​ಸಿಬಿಗೆ ಲಾಭ
ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು. ಅಸಾಧ್ಯವಾಗಿರೋದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈ, ಬೆಂಗಳೂರಿನಿಂದ ಮುಂಬೈ ರಸ್ತೆ ಹೀಗೆ ಪ್ರಯಾಣಿಸುವುದನ್ನು ಸುಲಭ ಮಾಡಿದ್ದಾರೆ. ಭಾರತ ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ.
ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
