ನವದೆಹಲಿ:ಇತರ ಹಿಂದುಳಿದ ವರ್ಗಗಳಲ್ಲಿ ಉಪವರ್ಗೀಕರಣ ಮಾಡುವಲ್ಲಿ ಯಾವ್ಯಾವ ಸಮಸ್ಯೆಗಳು ಎದುರಾಗಬಹುದು ಎಂಬಿತ್ಯಾದಿ ಅಂಶಗಳನ್ನು ಪರಿಶೀಲಿಸಲು ರಚಿಸಿರುವ ನಿವೃತ್ತ ನ್ಯಾಯಮೂರ್ತಿ ರೋಹಿಣಿ ಅವರ ನೇತೃತ್ವದ ಆಯೋಗದ ಅವಧಿಯನ್ನು ಇಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದೆ.
2017ರಲ್ಲಿ ಸಂವಿಧಾನದ ಆರ್ಟಿಕಲ್​ 340ರ ಅಡಿಯಲ್ಲಿ ಆಯೋಗ ರಚನೆ ಮಾಡಲಾಗಿದೆ. ಈಗಾಗಲೇ ಏಳು ಬಾರಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಇದೀಗ ಎಂಟನೇ ಬಾರಿಗೆ ಆಯೋಗದ ಅವಧಿಯನ್ನು 2020ರ ಜುಲೈ 31ರವರೆಗೆ ವಿಸ್ತರಿಸಲು ಕ್ಯಾಬಿನೇಟ್​ ಇಂದು ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + five =
Remember me
