ನವದೆಹಲಿ:ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್) ಕರೊನಾ ಕಾರಣದಿಂದ ಮುಂದೂಡಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೇನ್ಸಿ (ಎನ್​ಟಿಎ) ಮಂಗಳವಾರ ತಿಳಿಸಿದೆ.
2020 ರ ಡಿಸೆಂಬರ್​ನಲ್ಲಿ ನಡೆಯಬೇಕಿದ್ದ ನೆಟ್ ಪರೀಕ್ಷೆಯನ್ನು ಮೇ 2 ರಿಂದ 17 ರ ಮಧ್ಯೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇದೀಗ ದೇಶದಲ್ಲಿ ಕರೊನಾ ಎರಡನೇ ಅಲೆ ತೀವ್ರ ವ್ಯಾಪಿಸಿರುವ ಕಾರಣ ಮಹತ್ವದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಕರೊನಾ ಎರಡನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಎನ್​ಟಿಎ ಮಹಾ ನಿರ್ದೇಶಕರಿಗೆ ಯುಜಿಸಿ ನೆಟ್ ಪರೀಕ್ಷೆಗಳನ್ನು ಮುಂದೂಡಲು ಸೂಚಿಸಿದ್ದೇನೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಟ್ವಿಟ್​​ನಲ್ಲಿ ಹೇಳಿದ್ದರು.
ಸಿಬಿಎಸ್​ಇ ಪರೀಕ್ಷೆಗಳ ಬಗ್ಗೆ ನಿರ್ಧಾರ ಕೈಗೊಂಡ ನಂತರ ನೆಟ್ ಪರೀಕ್ಷೆಗಳನ್ನು ಮುಂದೂಡವ ಎರಡನೇ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
“ಯಾವುದೇ ರಾಜ್ಯವೂ ಸಂಪೂರ್ಣ ಲಾಕ್‌ಡೌನ್‌ ವಿಧಿಸುವುದಿಲ್ಲ”

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
