ನುಹ್​:ಜುಲೈ 31ರಂದು ಹರಿಯಾಣದ ನುಹ್​ನಲ್ಲಿ ವಿಶ್ವ ಹಿಂದೂ ಪರಿಷತ್​ ರ್‍ಯಾಲಿ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್​ ಶಾಸಕ ಮಾಮ್ಮನ್​ ಖಾನ್​ರನ್ನು ನ್ಯಾಯಾಲಯ 14ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಮಾಮ್ಮನ್​ ಖಾನ್​ ಅವರ ವಿರುದ್ಧ ಆಗಸ್ಟ್​ 1ರಂದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ದೂರಿನನ್ವಯ ರಾಜಸ್ಥಾನದಲ್ಲಿ ತಲೆಮಾರಿಸಿಕೊಂಡಿದ್ದ ಕಾಂಗ್ರೆಸ್​ ಶಾಸಕನನ್ನು ಸಪ್ಟೆಂಬರ್​ 14ರಂದು ವಶಕ್ಕೆ ಪಡೆದಿತ್ತು.
ಖಾನ್​ ಅವರನ್ನು ಬಂಧಿಸಿದ ತನಿಖಾ ತಂಡದ ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ತಿಳಿಸಿದ್ದರು. ಬಳಿಕ ನ್ಯಾಯಾಲಯ ಎರಡು ದಿನ ವಶಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತ್ತು. ತನಿಖೆಗೆ ಸಹಕರಿಸುತ್ತಿಲ್ಲ ಎಂದು ಖಾನ್​ ವಿರುದ್ಧ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಸೋಮವಾರ ಆರೋಪಿಸಿದ್ದರು. ಅಧಿಕಾರಿಗಳ ಆರೋಪದ ಬೆನ್ನಲ್ಲೇ ನ್ಯಾಯಾಲಯ ಅವರನ್ನು 14ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
#WATCH| Nuh CJM court sends Congress MLA Maman Khan to judicial custody for 14 days in connection with Nuh violence casepic.twitter.com/i1ZiPymeQm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
