ಸ್ವಿಜರ್ಲೆಂಡ್​:ಜಗತ್ತಿನಲ್ಲಿ ಕಳೆದ ಏಳು ದಿನಗಳಲ್ಲಿ ಒಟ್ಟು 20 ಲಕ್ಷ ಕರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಜನರಲ್ಲಿನ ಕರೊನಾ ಆತಂಕವನ್ನು ಹೆಚ್ಚಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಾರ, ಕಳೆದೊಂದು ವಾರದಲ್ಲಿ ಜಗತ್ತಿನಲ್ಲಿ ದಾಖಲೆ ಸಂಖ್ಯೆಯಲ್ಲಿ ಕರೊನಾ ಪ್ರಕರಣಗಳು ದಾಖಲಾಗಿವೆ. ಅಂದರೆ, ಸೆ. 14ರಿಂದ 20ರ ವರೆಗೆ ಸುಮಾರು 20 ಲಕ್ಷ ಮಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇದುವರೆಗಿನ ಲೆಕ್ಕಾಚಾರದ ಪ್ರಕಾರ ಒಂದು ವಾರದಲ್ಲಿ ಇಷ್ಟೊಂದು ದೊಡ್ಡಮಟ್ಟದಲ್ಲಿ ಸೋಂಕು ಪತ್ತೆಯಾಗಿದ್ದು ಇದೇ ಮೊದಲು. ಮತ್ತೊಂದೆಡೆ ಹಿಂದಿನ ವಾರಕ್ಕೆ ಹೋಲಿಸಿದೆ ಇದು ಶೇ. 6 ಹೆಚ್ಚಳ ಎಂದು ಡಬ್ಲ್ಯುಎಚ್​ಒ ಹೇಳಿದೆ.
ಸಮಾಧಾನದ ಸಂಗತಿ ಎಂದರೆ ಇದೇ ಅವಧಿಯಲ್ಲಿ ಕರೊನಾದಿಂದ ಸಾಯುವವರ ಪ್ರಮಾಣ ಶೇ. 10 ತಗ್ಗಿದೆ. ಕಳೆದ ಒಂದು ವಾರದಲ್ಲಿ ವಿಶ್ವದಲ್ಲಿ ಕರೊನಾ ಸೋಂಕಿನಿಂದಾಗಿ 36, 764 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seventeen =
Remember me
