ನವದೆಹಲಿ: ದೇಶದಲ್ಲಿ COVID19 ಸೋಂಕಿಗೆ ಬಲಿಯಾದವರ ಸಂಖ್ಯೆ ಶುಕ್ರವಾರ 17ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಸೋಂಕುಪೀಡಿತರ ಸಂಖ್ಯೆ 724ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶುಕ್ರವಾರ ಬೆಳಗ್ಗೆ 9.15ರ ಅಂಕಿ ಅಂಶವನ್ನು ಉಲ್ಲೇಖಿಸಿರುವ ಆರೋಗ್ಯ ಸಚಿವಾಲಯ, ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತಿನಲ್ಲಿ ಮೂರು ಸಾವು ಸಂಭವಿಸಿದೆ. ಇದೇ ವೇಳೆ, ಕರ್ನಾಟಕದಲ್ಲಿ ಸಾವಿನ ಸಂಖ್ಯೆ ಎರಡು ಎಂದು ಹೇಳಿದೆ. ಮೂರನೇ ಸಾವಿನ ಸಂಖ್ಯೆ ಸೇರಿದರೆ ದೇಶದಲ್ಲಿ ಈ ಸೋಂಕಿಗೆ ಬಲಿಯಾದವ ಸಂಖ್ಯೆ 18ಕ್ಕೆ ಏರಿದಂತಾಗುತ್ತದೆ.
ಇದುವರೆಗೆ ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್​, ದೆಹಲಿ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಸದ್ಯದ ಡೇಟಾ ಪ್ರಕಾರ ದೇಶದಲ್ಲಿ COVID 19 ಸೋಂಕು ತಗುಲಿದವರ ಸಂಖ್ಯೆ 724 ಆಗಿದ್ದು, ಇದರಲ್ಲಿ 640 ಜನರಿಗೆ ಸೋಂಕು ಇದೆ. 66 ಜನರಿಗೆ ಸೋಂಕು ನಿವಾರಣೆಯಾಗಿ ಆರೋಗ್ಯ ಸುಧಾರಿಸಿದೆ. 47 ಜನ ವಿದೇಶೀಯರು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. (ಏಜೆನ್ಸೀಸ್)
https://www.vijayavani.net/coronavirus-effect-doordarshan-to-retelecast-ramayan-after-public-demand-from-saturday/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + seventeen =
Remember me
