ದೇಶದಲ್ಲಿ ಸೋಂಕಿತರಸಂಖ್ಯೆ 5 ಸಾವಿರದ ಗಡಿ ದಾಟಿದೆ. ಮಂಗಳವಾರ ಹೊಸದಾಗಿ 421 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,212ಕ್ಕೆ ಏರಿದೆ. ಜತೆಗೆ 16 ಜನರು ಸಾವನ್ನಪ್ಪಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಸದ್ಯ 4,641 ಪ್ರಕರಣಗಳು ಸಕ್ರಿಯವಾಗಿದ್ದು, ಈವರೆಗೆ 421 ಜನರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಮಂಗಳವಾರ 8 ಜನರು
ಸಾವನ್ನಪ್ಪಿದ್ದು, ಒಟ್ಟು ಸಂಖ್ಯೆ 60ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಅತೀ ಹೆಚ್ಚು ಜನರು ಸಾವನ್ನಪ್ಪಿದ ಹಾಗೂ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡ ರಾಜ್ಯ ಮಹಾರಾಷ್ಟ್ರವಾಗಿದೆ. ನಂತರದ ಸ್ಥಾನಗಳಲ್ಲಿ ತಮಿಳುನಾಡು, ದೆಹಲಿ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಿವೆ. ವಿಶ್ವದಾದ್ಯಂತ ಕಳೆದ 24 ತಾಸಿನಲ್ಲಿ 3,659 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 78,226ಕ್ಕೆ ಏರಿಕೆಯಾಗಿದೆ.
ಹೊಸದಾಗಿ 34,393 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,80,211ಕ್ಕೆ ಏರಿದೆ. ಜಗತ್ತಿನಾದ್ಯಂತ ಈವರೆಗೆ 2,93,879 ಜನರು ಗುಣಮುಖರಾಗಿದ್ದು, 47,618 ಜನರ ಸ್ಥಿತಿ ಗಂಭೀರವಾಗಿದೆ.
ಒಬ್ಬ ಸೋಂಕಿತನಿಂದ 30 ದಿನದಲ್ಲಿ 406 ಜನರಿಗೆ ಹಬ್ಬುತ್ತೆ ಕರೊನಾ, ಲಾಕ್​ಡೌನ್​ ಬೇಕಾ ಬೇಡವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
