ಲಖನೌ:ಕೆಲಸಕ್ಕೆ ಹಾಜರಾದ ಒಂದೇ ದಿನಕ್ಕೇ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್​ ಶವ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವ್​ನಲ್ಲಿ ನಡೆದಿದೆ.
ಮಹಿಳೆಯು ಶುಕ್ರವಾರವಷ್ಟೇ ಖಾಸಗಿ ಆಸ್ಪತ್ರೆಗೆ ನರ್ಸ್​ ಆಗಿ ಕೆಲಸಕ್ಕೆ ಸೇರಿದ್ದಳು. ಆದರೆ ಮಾರನೇ ದಿನವೇ ಅದೇ ಕಟ್ಟಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.
ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು, ಅತ್ಯಾಚಾರವಾಗಿರುವುದು ಇನ್ನೂ ದೃಢವಾಗಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಲಿದ್ದು, ಸದ್ಯ ಮೂವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನು ಈ ಆಸ್ಪತ್ರೆ ಪ್ರಾರಂಭವಾಗಿ ಕೇವಲ ಐದು ದಿನಗಳಾಗಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿ ಶಶಿ ಶೇಖರ್​ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + seven =
Remember me
