ಕೋಲ್ಕತ್ತಾ:ಆರ್ ಜಿ ಕಾರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಸ್ಪತ್ರೆ ವೈದ್ಯರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:‘ನಟ, ರಾಜಕಾರಣಿ ಯಾರನ್ನು ಮದುವೆಯಾಗ್ತೀರಿ?’: ಪ್ರೇಕ್ಷಕನ ಪ್ರಶ್ನೆಗೆ ಕಂಗನಾ ಹೇಳಿದ್ದೇನು?
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯ ಇಲಂಬಜಾರ್ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆತನ ಕುಟುಂಬಸ್ಥರು ಶನಿವಾರ ರಾತ್ರಿ ಇಳಂಬಜಾರ್ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ನರ್ಸ್ ಪ್ರಯತ್ನಿಸಿದರು. ಆಗ ಆತ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇದಲ್ಲದೇ ಆಕೆಯನ್ನು ತೀವ್ರವಾಗಿ ನಿಂದಿಸಿದ್ದಾನೆ ಎನ್ನಲಾಗಿದೆ.
ಚಿಕಿತ್ಸೆಗೆ ಸಹಕರಿಸುವಂತೆ ನರ್ಸ್ ಅವರ ಕುಟುಂಬ ಸದಸ್ಯರಿಗೆ ಸಲಹೆ ನೀಡಿದರು. ಆದರೆ, ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಈ ವಿಷಯವನ್ನು ಆಸ್ಪತ್ರೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾಳೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಆಸ್ಪತ್ರೆ ನರ್ಸ್ ಪ್ರತಿಕ್ರಿಯಿಸಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತೆ ಇಲ್ಲದಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಟಿಎಂಸಿಗೆ ಶಾಕ್​..ಅಸ್ಸಾಂ ಪಕ್ಷದ ಅಧ್ಯಕ್ಷ ರಾಜೀನಾಮೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 3 =
Remember me
