ಮುಂಬೈ:ಪ್ರಸ್ತುತ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರ ಗುಂಪಿನ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಯುದ್ಧ ಪೀಡಿತ ಪ್ರದೇಶದಲ್ಲೇ ಸಿಲುಕಿದ್ದ ಬಾಲಿವುಡ್​ ನಟಿ ನುಶ್ರತ್ ಭರುಚ್ಚ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.
ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ನಟನೆಯ ಅಕೆಲ್ಲಿಯ ಪ್ರದರ್ಶನಕ್ಕಾಗಿ ನುಶ್ರತ್ ಭರುಚ್ಚ ಇಸ್ರೇಲ್​ಗೆ ತೆರಳಿದ್ದರು. ಮಧ್ಯಾಹ್ನ 2 ಘಂಟೆ ಸುಮಾರಿಗೆ ಅವರು ಮುಂಬೈನಲ್ಲಿರುವ ಛತ್ರಪತಿ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದ್ಧಾರೆ.
ಯುದ್ಧ ಪೀಡಿತ ಇಸ್ರೇಲ್​ನಲ್ಲೇ ನಟಿ ನುಶ್ರತ್​ ಅವರು ಸಿಲುಕಿಕೊಂಡಿದ್ದು, ಅವರ ಕುಟುಂಬವನ್ನು ಆತಂಕಕ್ಕೆ ದೂಡಿತ್ತು. ಆದರೆ, ಇದೀಗ ಅವರು ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ್ದ ನುಶ್ರತ್​ ತಂಡದ ಸದಸ್ಯರೊಬ್ಬರು ದುರಾದೃಷ್ಟವಶಾತ್​ ಸಂಘರ್ಷ ಪೀಡಿತ ಇಸ್ರೇಲ್​ನಲ್ಲಿ ನುಶ್ರತ್​ ಸಿಲುಕಿದ್ದಾರೆ. ಹೈಫಾ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಸ್ರೇಲ್​ಗೆ ಹಾರಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ಕೊನೆಯ ಬಾರಿಗೆ ಆಕೆಯೊಂದಿಗೆ ಸಂಪರ್ಕ ಸಾಧಿಸಿದ್ದೆ. ಬೇಸ್​ಮೆಂಟ್​ ಒಂದರಲ್ಲಿ ಸುರಕ್ಷಿತವಾಗಿ ಇರುವುದಾಗಿ ತಿಳಿಸಿದರು.
#WATCH| Actress Nushrratt Bharuccha arrives at Mumbai airport from Israelhttps://t.co/kLfmKomeN3pic.twitter.com/FqyhOtj9FZ
ಇದನ್ನೂ ಓದಿ:VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು
ಇದಾದ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ನುಶ್ರತ್​ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಎಲ್ಲ ಪ್ರಯತ್ನವನ್ನು ಮಾಡುತ್ತಿದ್ದೇವೆ ಮತ್ತು ಯಾವುದೇ ಹಾನಿಯಾಗದೇ, ಆರೋಗ್ಯಯುತವಾಗಿಯೇ ಆಕೆ ತವರಿಗೆ ಮರಳುತ್ತಾಳೆ ಎಂದು ಭರವಸೆ ಇದೆ ಎಂದು ನುಶ್ರತ್​ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು.
ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.
ಗಾಜಾ ಪಟ್ಟಿ ಎಂದರೇನು? : ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ.
#WATCH| Maharashtra: Actress Nushrratt Bharuccha refuses to speak to the media as she arrives at Mumbai airport from Israelpic.twitter.com/Ru8dDtcZmP
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
