ನವದೆಹಲಿ:ಜನವರಿ 14ರಿಂದ ಆರಂಭವಾಗಲಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ನ್ಯಾಯಕ್ಕಾಗಿ ಹೋರಾಡುತ್ತಿರುವವರು ವೇದಿಕೆಯಾಗಿ ಬಳಸಿಕೊಳ್ಳಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ.
ಮಣಿಪುರದಿಂದ ಜನವರಿ 14ರಂದು ಆರಂಭವಾಗಲಿರುವ ಯಾತ್ರೆ ಹಿನ್ನೆಲೆಯಲ್ಲಿ ನಾಗರಿಕ ಸಂಘಟನೆಗಳು ಹಾಗೂ ಜನಪರ ಚಳವಳಿಗಳ ಪ್ರತಿನಿಧಿಗಳ ಜೊತೆ ನಡೆಸಿದ ಸಂವಾದದಲ್ಲಿ ರಾಹುಲ್​ ಗಾಂಧಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಆಗುತ್ತಿರುವ ಅನ್ಯಾಯ ಎದುರಿಸುವಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ವ್ಯಕ್ತಿಗಳು ಒಂದಾಗುವುದು ನಿರ್ಣಾಯಕವಾಗಲಿದೆ. ದೇಶದಲ್ಲಿ ದಲಿತರು, ಆದಿವಾಸಿಗಳು, ಒಬಿಸಿಗಳು, ಮಹಿಳೆಯರು, ನಿರುದ್ಯೋಗಿ ಯುವ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರಾಹುಲ್​ ಚರ್ಚಿಸಿದ್ದಾರೆ.
Shri@RahulGandhimet with representatives of civil society organisations and people’s movements to discuss issues affecting various groups in India.He welcomed suggestions and emphasised the importance of a collective effort to combat injustice caused by PM Modi, BJP & RSS.…pic.twitter.com/p1gRrRTJEC
ಇದನ್ನೂ ಓದಿ:ಬಿಗ್​ಬಾಸ್​ ಸೀಸನ್​ 10; ಇವರೇ ನೋಡಿ ಫಿನಾಲೆ ಪ್ರವೇಶಿಸುತ್ತಿರುವ ಮೊದಲ ಸ್ಫರ್ಧಿ
ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14ರಂದು ಇಂಫಾಲ್‌ನಿಂದ ಮಧ್ಯಾಹ್ನ 12.30 ಕ್ಕೆ ಪ್ರಾರಂಭವಾಗಲಿದೆ. ಇದು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಅರುಣಾಂಚಲ್ ಪ್ರದೇಶ, ಮೇಘಾಲಯ ಮೂಲಕ ಹಾದುಹೋಗುತ್ತದೆ. ಇದು ಮಧ್ಯ ಭಾರತವನ್ನು ತಲುಪುವ ಮೊದಲು ಬಂಗಾಳವನ್ನು ತಲುಪುತ್ತದೆ.
ಪಕ್ಷದ ಹಿರಿಯ ನಾಯಕರ ಆರೋಗ್ಯದ ಕಾಳಜಿಯಂತೆ ಸಾರ್ವತ್ರಿಕ ಚುನಾವಣೆಯ ಸಮಯದ ನಿರ್ಬಂಧದಿಂದಾಗಿ ಬದಲಾವಣೆಯಾಗಿದೆ. ನಾವು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು, ಅವರ ಬೆಂಬಲಿಗರು, ಸಾರ್ವಜನಿಕರು ಮತ್ತು ಎನ್‌ಜಿಒಗಳನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 17 =
Remember me
