ಭುವನೇಶ್ವರ:ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಒಡಿಶಾದ ಬಿಜೆಪಿ ಶಾಸಕ ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ದಿಯೊದರ್ ಕ್ಷೇತ್ರದ ಬಿಜೆಪಿ ಶಾಸಕ ಸುಭಾಸ್ ಪಾಣಿಗ್ರಾಹಿ ಅವರೇ ಬಜೆಟ್ ಅಧಿವೇಶನ ನಡೆಯುವ ವೇಳೆ ಹ್ಯಾಂಡ್​ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಭಾಗದ ಭತ್ತದ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ಸುಭಾಸ್ ಪಾಣಿಗ್ರಾಹಿ ಅವರು ಈ ರೀತಿ ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ.
ದಿಬಗಡ್ ಪ್ರದೇಶದಲ್ಲಿ ಸುಮಾರು ಎರಡು ಲಕ್ಷ ಕ್ವಿಂಟಾಲ್ ಭತ್ತದ ಬೆಳೆ ಸರ್ಕಾರ ಖರೀದಿ ಕೇಂದ್ರ ತೆರೆಯದ್ದಕ್ಕೆ ಹಾಗೇ ಉಳಿದಿದೆ. ಇದರಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸುವ ಭರದಲ್ಲಿ ಸುಭಾಸ್ ಸ್ಯಾನಿಟೈಸರ್ ಕುಡಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಒಡಿಶಾ ರಾಜ್ಯ ಸರ್ಕಾರದ 2021-22 ನೇ ಸಾಲಿನ ಬಜೆಟ್ ಮಾರ್ಚ್ 22 ರಂದು ಮಂಡನೆಯಾಗಲಿದ್ದು ಮಾರ್ಚ್ 8 ರಿಂದ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ವೇಳೆ ಬಿಜೆಪಿ ಶಾಸಕ ನಡೆದುಕೊಂಡಿದ್ದಕ್ಕೆ ಬಿಜೆಡಿ ಶಾಸಕರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಬಿಜೆಪಿ ಶಾಸಕ ಸದನಕ್ಕೆ ಅವಮಾನ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:‘ಹರಿಜನ ಹೆಣ್ಣುಮಕ್ಕಳ ಕನ್ನಡ ಪ್ರಾಥಮಿಕ ಶಾಲೆ’ ಮಕ್ಕಳಲ್ಲಿ ಬೆಳಕು ತಂದಿದೆ ಕಿಚ್ಚನ ಆ ಒಂದು ಮಾತು!
ಸದನದಲ್ಲಿ ಬಿಜೆಪಿ ಶಾಸಕನ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಇದೊಂದು ಶುದ್ಧ ನಾಟಕ ಎಂದು ಶಾಸಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ವಿಷಯ ಟ್ವಿಟ್ಟರ್​ನಲ್ಲಿ ಸೂಸೈಡ್​ ಡ್ರಾಮಾ ಎಂದು ಟ್ರೆಂಡಿಂಗ್ ಕೂಡ ಆಗಿತ್ತು.
ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಏಳು ಭಯಾನಕ ಉಗ್ರರ ಸೆರೆ ಹಿಡಿದ ಯೋಧರು

ಚಲಿಸುತ್ತಿರುವಾಗಲೇ ಧಗಧಗನೆ ಹೊತ್ತಿ ಉರಿದ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಬೋಗಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 16 =
Remember me
