ಒಡಿಸಾ:ಬಾಲಸೋರ್​ ರೈಲು ದುರಂತ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆ ಒಂದು ಒಡಿಶಾದಲ್ಲಿ ನಡೆದಿದ್ದು ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಒಡಿಶಾದ ಜಜ್‌ಪುರ್ ಕಿಯೋಂಜರ್ ರಸ್ತೆಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್​ ರೈಲಿನಡಿ ಸಿಲುಕಿ ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!
ಭಾರಿ ಮಳೆ ಸುರಿಯುತ್ತಿದ್ದ ಕಾರಣ ಕಾರ್ಮಿಕರು ರೈಲಿನ ಬೋಗಿಗಳಡಿ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಏಕಾಏಕಿ ಚಲಿಸಿದ ಕಾರಣ ಕಾರ್ಮಿಕರು ಬೇರೆಡೆ ತೆರಳಲು ಸಾಧ್ಯವಾಗದೆ ರೈಲಿನಡಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ.
ಗಾಯಾಳುಗಳನ್ನು ಕಟಕ್​ನಲ್ಲಿರುವ ಎಸ್​ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ನೆರವನ್ನು ಒದಿಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 4 =
Remember me
