ನವದೆಹಲಿ:ಪೊಲೀಸ್ ಅಧಿಕಾರಿ ಹಾರಿಸಿದ್ದ ಗುಂಡಿನಿಂದ ಗಾಯಗೊಂಡಿದ್ದ ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್​ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರದ ಬಳಿಯ ಗಾಂಧಿ ಚೌಕ್ ಬಳಿ ಇಂದು ಸಹಾಯಕ ಸಬ್​ ಇನ್​ಸ್ಪೆಕ್ಟರ್ ಸಚಿವರ ಮೇಲೆ ಗುಂಡು ಹಾರಿಸಿದ್ದರು.
ಸಚಿವರು ಬೆಳಗ್ಗೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಎಎಸ್​ಐ ಗೋಪಾಲ್ ದಾಸ್ ಎಂಬಾತ ಗುಂಡು ಹಾರಿಸಿದ್ದ. ಪರಿಣಾಮವಾಗಿ ಆರೋಗ್ಯ ಸಚಿವರ ಎದೆಗೇ ಗುಂಡು ತಗುಲಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ತೀವ್ರ ನಿಗಾ ವಿಭಾಗದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಒಂದು ಬುಲೆಟ್​ ದೇಹಕ್ಕೆ ಹೊಕ್ಕು ಹೊರಹೋಗಿದ್ದು, ಹೃದಯ ಹಾಗೂ ಶ್ವಾಸಕೋಶಕ್ಕೆ ಗಾಯಗೊಳಿಸಿತ್ತು. ಶಸ್ತ್ರಚಿಕಿತ್ಸೆ ಮಾಡಿ ಚಿಕಿತ್ಸೆ ನೀಡಲಾಯಿತಾದರೂ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಸಾವಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.
ಘಟನೆ ತಕ್ಷಣ ಎಎಸ್​ಐಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶೂಟ್ ಮಾಡಲು ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ತನ್ನ ಪತಿಗೆ ಮಾನಸಿಕ ಸಮಸ್ಯೆ ಇದ್ದು ಕೆಲವು ವರ್ಷಗಳಿಂದ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಎಸ್​ಐ ಪತ್ನಿ ಹೇಳಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ

ಫೇಸ್​ಬುಕ್​ ಫ್ರೆಂಡ್​ನ ಮದುವೆಯಾಗಲು ಭಾರತಕ್ಕೆ ಬಂದ ವಿದೇಶಿ ಬೆಡಗಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + 1 =
Remember me
