ಒಡಿಶಾ:ಭೀಕರ ರೈಲು ದುರಂತದಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಇದೀಗ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ 10 ಲಕ್ಷ ರೂಪಾಯಿ ಘೋಷಿಸಿದೆ.
ಅಪಘಾತದಲ್ಲಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ; ಸಂತ್ರಸ್ತರ ಸಂಬಂಧಿಕರಿಗಾಗಿ ಇಲ್ಲಿವೆ ಸಹಾಯವಾಣಿ ಸಂಖ್ಯೆಗಳು
ಒಡಿಶಾದ ಘಟನಾ ಸ್ಥಳಕ್ಕೆ ತೆರಳುತ್ತಿದ್ದು, ಗಾಯಾಳುಗಳ ಚೇತರಿಕೆ ಪ್ರಾರ್ಥಿಸುತ್ತೇವೆ. ಭುವನೇಶ್ವರ ಮತ್ತು ಕೊಲ್ಕತಾಗಳಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ. ಎನ್​​ಡಿಆರ್​ಎಫ್, ರಾಜ್ಯ ಸರ್ಕಾರಗಳ ತಂಡ ಹಾಗೂ ವಾಯುಪಡೆಯ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.
ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲುಗಾಡಿಯ 10-12 ಕೋಚ್‌ಗಳು ಬಾಲೇಶ್ವರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಕ್ಕದ ಇನ್ನೊಂದು ಹಳಿ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ.
ಕೆಲ ಸಮಯದ ನಂತರ ಆ ಹಳಿಯ ಮೇಲೆ ಬಂದ ಯಶವಂತಪುರ- ಹೌರಾ ರೈಲು ಈ ಮೊದಲೇ ಹಳಿ ತಪ್ಪಿ ಬಿದ್ದಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯಶವಂತಪುರ- ಹೌರಾ ರೈಲಿನ 3-4 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twelve − three =
Remember me
