ಬೆಂಗಳೂರು:ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡ ಪರಿಣಾಮ ರಾಷ್ಟ್ರಮಟ್ಟದ ಪಂದ್ಯಕ್ಕೆ ತೆರಳಿ ಕೋಲ್ಕತದಲ್ಲಿ ತೊಂದರೆ ಎದುರಿಸುತ್ತಿದ್ದ ಕರ್ನಾಟಕ ವಾಲಿಬಾಲ್ ತಂಡಕ್ಕೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಸೂಚನೆ ಮೇರೆಗೆ ಈ ವ್ಯವಸ್ಥೆ ಕೈಗೊಳ್ಳಲಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ಈ ವರೆಗೆ ಸುಮಾರು 300 ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸಿಗರಿಂದ ಕಾನೂನು ಕಿರುಕುಳ; ಬಿಜೆಪಿ ಕಾರ್ಯಕರ್ತರಿಗಾಗಿ ಹೆಲ್ಪ್​ಲೈನ್​: ಸಂಸದ ತೇಜಸ್ವಿ ಸೂರ್ಯ
ಈ ಅಪಘಾತದ ಪರಿಣಾಮವಾಗಿ ಬೆಂಗಳೂರು-ಕೋಲ್ಕತ ನಡುವೆ ಸಂಚರಿಸು ಎಲ್ಲ ರೈಲುಗಳು ಸ್ಥಗಿತಗೊಂಡಿದ್ದರಿಂದ, ಕೋಲ್ಕತಕ್ಕೆ ತೆರಳಿದ್ದ ಕರ್ನಾಟಕ ವಾಲಿಬಾಲ್ ತಂಡದ ಸದಸ್ಯರು ಅಲ್ಲಿನ ರೈಲು ನಿಲ್ದಾಣದಲ್ಲಿ ಪರದಾಟ ಅನುಭವಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಕೋಚ್​ಗಳು ಸೂಕ್ತ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟವರಲ್ಲಿ ವಿನಂತಿ ಮಾಡಿಕೊಂಡಿದ್ದರು.

ಇದನ್ನೂ ಓದಿ:ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
ಹೀಗಾಗಿ ಹುಡುಗರು-ಹುಡುಗಿಯರು ಹಾಗೂ ಕೋಚ್​ಗಳು ಸೇರಿ ಕರ್ನಾಟಕ ವಾಲಿಬಾಲ್ ತಂಡದ 32 ಮಂದಿಗೆ ವಿಮಾನದಲ್ಲಿ ತಾಯ್ನಾಡಿಗೆ ಬರಲು ವ್ಯವಸ್ಥೆ ಮಾಡಿಕೊಡಲಾಗಿದೆ. ಈ 32 ಜನರು ನಾಳೆ ಬೆಳಗ್ಗೆ 4.15ಕ್ಕೆ ಕೋಲ್ಕತದಿಂದ ಹೊರಡಲಿರುವ ಇಂಡಿಗೋ ಏರ್​ಲೈನ್ಸ್​ನಲ್ಲಿ ಹೊರಟು ಬೆಂಗಳೂರಿಗೆ 6.50ರ ಸುಮಾರಿಗೆ ಬಂದಿಳಿಯಲಿದ್ದಾರೆ.

ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು

ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
