ಒಡಿಶಾ:ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸುಮಾರು 350ಕ್ಕೂ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ರಾಜ್ಯ ಕೆಲ ಪ್ರಯಾಣಿಕರೂ ಇದ್ದಾರೆ ಎಂದು ಅಂದಾಜಿಸಲಾಗಿದೆ.
ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ರೈಲು ದುರಂತ ಒಡಿಶಾದ ಬಾಲೇಶ್ವರ ಸಮೀಪ ಸಂಭವಿಸಿದೆ. ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲುಗಾಡಿಯ 10-12 ಕೋಚ್‌ಗಳು ಬಾಲೇಶ್ವರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಕ್ಕದ ಇನ್ನೊಂದು ಹಳಿ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ.
ಕೆಲ ಸಮಯದ ನಂತರ ಆ ಹಳಿಯ ಮೇಲೆ ಬಂದ ಯಶವಂತಪುರ- ಹೌರಾ ರೈಲು ಈ ಮೊದಲೇ ಹಳಿ ತಪ್ಪಿ ಬಿದ್ದಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯಶವಂತಪುರ- ಹೌರಾ ರೈಲಿನ 3-4 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen + 10 =
Remember me
